ಬೆಂಗಳೂರು: ಜಯನಗರದ ಮಾಜಿ ಶಾಸಕ ಬಿಎನ್ ವಿಜಯ್ ಕುಮಾರ್ ಅವರ ಅಕಾಲಿಕ ಮರಣದ ಹಿನ್ನೆಲೆಯಲ್ಲಿ ಮುಂದೂಡಲಾಗಿದ್ದ ಜಯನಗರ ವಿಧಾನಸಭಾ ಕ್ಷೇತ್ರಕ್ಕೆ ಜೂನ್ 11ರಂದು ನಿಗದಿಯಾಗಿದ್ದು, ಬಿಜೆಪಿಯಿಂದ ವಿಜಯ್ ಕುಮಾರ್ ಅವರ ಸೋದರ ಪ್ರಹ್ಲಾದ್ ಬಾಬು ಅವರು ಸ್ಪರ್ಧಿಸಲಿದ್ದಾರೆ.
ಬಿಜೆಪಿ ಕೇಂದ್ರ ಚುನಾವಣಾ ಸಮಿತಿ ಇಂದು ಜಯನಗರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯನ್ನು ಪ್ರಕಟಿಸಿದ್ದು, ಪ್ರಹ್ಲಾದ್ ಬಾಬು ಅವರು ಕಣಕ್ಕಿಳಿಯಲಿದ್ದಾರೆ.
ಕಾಂಗ್ರೆಸ್ ನಿಂದ ಮಾಜಿ ಸಚಿವ ರಾಮಲಿಂಗಾ ರೆಡ್ಡಿ ಅವರ ಪುತ್ರಿ ಸೌಮ್ಯರೆಡ್ಡಿ ಸ್ಪರ್ಧಿಸಿದ್ದರೆ ಸಾಮಾಜಿಕ ಹೋರಾಟಗಾರ ರವಿಕೃಷ್ಣ ರೆಡ್ಡಿ ಸ್ವತಂತ್ರ ಅಭ್ಯರ್ಥಿಯಾಗಿ ಅಖಾಡಕ್ಕೆ ಇಳಿದಿದ್ದಾರೆ.
ಜಯನಗರ ವಿಧಾನಸಭಾ ಕ್ಷೇತ್ರಕ್ಕೆ ಜೂನ್ 11ರಂದು ಮತದಾನ ನಡೆಯಲಿದ್ದು, ಜೂನ್ 13ಕ್ಕೆ ಮತ ಎಣಿಕೆ ನಡೆಯಲಿದೆ.
ಪ್ರಚಾರ ಮಾಡುವ ಸಂದರ್ಭದಲ್ಲಿ ಅನಾರೋಗ್ಯಕ್ಕೀಡಾಗಿ ಜಯನಗರ ಶಾಸಕ ಬಿ.ಎನ್.ವಿಜಯ್ ಕುಮಾರ್ ಮೃತಪಟ್ಟ ಕಾರಣ ಚುನಾವಣೆ ರದ್ದುಗೊಂಡಿತ್ತು.