ಪ್ರಣಾಳಿಕೆಯ ಎಲ್ಲಾ ಭರವಸೆಗಳನ್ನು ಈಡೇರಿಸುತ್ತೇನೆ: ಹೆಚ್.ಡಿ. ಕುಮಾರಸ್ವಾಮಿ

Published On :
ಬೆಂಗಳೂರು; ವಿಧಾನಸಭಾ ಚುನಾವಣೆ ವೇಳೆ ಬಿಡುಗಡೆ ಮಾಡಿ ಪ್ರಣಾಳಿಕೆಯಲ್ಲಿ ನೀಡಲಾಗಿದ್ದ ಪ್ರತೀಯೊಂದು ಭರವಸೆಯನ್ನೂ ಈಡೇರಿಸುತ್ತೇನೆಂದು ನಿಯೋಜಿತ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಬುಧವಾರ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ರೈತರ ಹಿತಕ್ಕಾಗಿ ಕೆಲಸ ಮಾಡುತ್ತೇನೆ. ಯಾವುದೇ ಕಾರಣಕ್ಕೂ ಪಲಾಯನ ಮಾಡುವುದಿಲ್ಲ. ಚುನಾವಣಾ ಸಂದರ್ಭದಲ್ಲಿ ಪ್ರಣಾಳಿಕೆಯಲ್ಲಿ ನೀಡಲಾದ ಪ್ರತೀಯೊಂದು ಭರವಸೆಯನ್ನೂ ಈಡೇರಿಸಲಾಗುತ್ತದೆ. ರೈತ ಸಮುದಾಯದ ಹಿತಾಸಕ್ತಿಗಳನ್ನು ಕಾಪಾಡುವುದು ನಮ್ಮ ಪ್ರಮುಖ ಆದ್ಯತೆ ಎಂದು ಹೇಳಿದ್ದಾರೆ.
ಪ್ರಸ್ತುತದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿಯಾಗುತ್ತಿರುವುದಕ್ಕೆ ನನಗೆ ಸಂಪೂರ್ಣ ತೃಪ್ತಿ ತಂದಿಲ್ಲ. ಮನಸ್ಸಿನಲ್ಲಿ ಒಂದು ನೋವು ತುಂಬಿಕೊಂಡೇ ಅಧಿಕಾರ ಸ್ವೀಕರಿಸುತ್ತಿದ್ದೇನೆ. ಸ್ವತಂತ್ರವಾಗಿ ಅಧಿಕಾರಕ್ಕೆ ಬರಬೇಕೆಂಬುದು ನನ್ನ ಆಸ್ಕೆಯಾಗಿದ್ದು ಎಂದು ಇದೇ ವೇಳೆ ಬೇಸರ ವ್ಯಕ್ತಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Congressಕಾಂಗ್ರೆಸ್JDSಜೆಡಿಎಸ್ಹೆಚ್.ಡಿ.ಕುಮಾರಸ್ವಾಮಿHD. KumaraswamyKarnataka Assembly Electionಕರ್ನಾಟಕ ವಿಧಾನಸಭೆ ಚುನಾವಣೆ
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


