ರಾಜಕೀಯ

ಹೆಚ್'ಡಿ.ಕುಮಾರಸ್ವಾಮಿ ಪ್ರಮಾಣಕ್ಕೆ ಬಿಜೆಪಿ ವಿರೋಧ; ಜನಮತ ವಿರೋಧಿ ದಿನಾಚರಣೆಗೆ ನಿರ್ಧಾರ

ಹೆಚ್'ಡಿ.ಕುಮಾರಸ್ವಾಮಿ ಪ್ರಮಾಣಕ್ಕೆ ಬಿಜೆಪಿ ವಿರೋಧ; ಜನಮತ ವಿರೋಧಿ ದಿನಾಚರಣೆಗೆ ನಿರ್ಧಾರ
ಸಂಗ್ರಹ ಚಿತ್ರ
Published On :
ಬೆಂಗಳೂರು: ಜೆಡಿಎಸ್-ಕಾಂಗ್ರೆಸ್ ನೇತೃತ್ವದ ಸಮ್ಮಿಶ್ರ ಸರ್ಕಾರ ಅಸ್ತಿತ್ವಕ್ಕೆ ಬರುತ್ತಿರುವುದನ್ನು ವಿರೋಧಿಸಿ ಬುಧವಾರ ಬಿಜೆಪಿ ವತಿಯಿಂದ ರಾಜ್ಯಾದಾದ್ಯಂತ ಜನಮತ ವಿರೋಧಿ ದಿನ ಆಚರಿಸಲು ನಿರ್ಧರಿಸಲಾಗಿದೆ ಎಂದು ತಿಳಿದುಬಂದಿದೆ. 
ಹೆಚ್.ಡಿ.ಕುಮಾರಸ್ವಾಮಿ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಬಿಜೆಪಿ ಪಕ್ಷದ ಯಾವುದೇ ನಾಯಕರು ಪಾಲ್ಗೊಳ್ಳುವುದಿಲ್ಲ ಎಂದು ಬಿಜೆಪಿ ಹೇಳಿದೆ. 
ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಬಿಜೆಪಿ ವಕ್ತಾರ ಶಾಂತರಾಮ್ ಅವರು, ಅಪವಿತ್ರ ಮೈತ್ರಿ ಸರ್ಕಾರದ ವಿರುದ್ಧ ನಾಳೆ ಎಲ್ಲಾ ಜಿಲ್ಲಾ ಕೇಂದ್ರಗಳು ಸೇರಿದಂತೆ ರಾಜ್ಯಾದಾದ್ಯಂತ ಪಕ್ಷದ ಕಾರ್ಯಕರ್ತರು ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ ನಡೆಸಲಿದ್ದಾರೆಂದು ಹೇಳಿದ್ದಾರೆ. 
ಬೆಂಗಳೂರು ನಗರದ ಮೌರ್ಯ ಹೋಟೆಲ್ ಎದುರಿನ ಗಾಂಧೀಜಿ ಪ್ರತಿಮೆ ಎದುರು ಬಿಜೆಪಿ ಮುಖಂಡರು ಪ್ರತಿಭಟನೆ ನಡೆಸಲಿದ್ದಾರೆ. ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮುಖಂಡರಾದ ಆರ್.ಅಶೋಕ್ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆಂದು ತಿಳಿಸಿದ್ದಾರೆ. ಅಲ್ಲದೆ, ಬುಧವಾರ ಬೆಂಗಳೂರಿನಲ್ಲಿ ನಡೆಸಲು ಉದ್ದೇಶಿಸಿದ್ದ ಬಿಜೆಪಿ ಪರಾಜಿತ ಅಭ್ಯರ್ಥಿಗಳ ಸಭೆಯನ್ನೂ ಮುಂದೂಡಲಾಗಿದೆ ಎಂದಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.