ಪ್ರಮಾಣವಚನ ಸ್ವೀಕಾರ ಸಮಾರಂಭ ಎನ್'ಡಿಎ ವಿರುದ್ದ ಶಕ್ತಿ ಪ್ರದರ್ಶನದ ವೇದಿಕೆಯೇ?

Published On :
ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಹೆಚ್.ಡಿ.ಕುಮಾರಸ್ವಾಮಿಯವರು ಪ್ರಮಾಣವಚನ ಸ್ವೀಕರಿಸುವ ಸಮಾರಂಭ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಎನ್'ಡಿಎ ಸರ್ಕಾರದ ವಿರುದ್ಧದ ಶಕ್ತಿ ಪ್ರದರ್ಶನದ ವೇದಿಕೆಯಾಗಿ ಪರಿವರ್ತನೆಯಾಗಲಿದೆ.
ಶಕ್ತಿಸೌಧ ವಿಧಾನಸೌಧದ ಹೊರಾಂಗಣದಲ್ಲಿ ಬುಧವಾರ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿಯವರು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡುತ್ತಿದ್ದು, ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ವಿವಿಧ ರಾಜ್ಯದ ಗಣ್ಯಾತಿ ಗಣ್ಯರು ಆಗಮಿಸುತ್ತಿದ್ದಾರೆ.
ಸಮಾರಂಭಕ್ಕೆ ಬಿಜೆಪಿ ಸೇರಿದಂತೆ ಎನ್'ಡಿಎ ಅಂಗಪಕ್ಷಗಳನ್ನು ಹೊರತುಪಡಿಸಿ ಕಾಂಗ್ರೆಸ್ ಇತ್ಯಾದಿಯಾಗಿ ದೇಶದ ಬಹುತೇಕ ಪ್ರಾದೇಶಿಕ ಪಕ್ಷಗಳ ನಾಯಕರು ಪಾಲ್ಗೊಳ್ಳುತ್ತಿದ್ದಾರೆ. ಹಲವು ಮುಖ್ಯಮಂತ್ರಿಗಳು ಆಗಮಿಸುತ್ತಿದ್ದಾರೆ. ಇವರೆಲ್ಲರೂ ಪ್ರಮಾಣವಚನ ಸಮಾರಂಭದ ಅತಿಗಣ್ಯ ವ್ಯಕ್ತಿಗಳ ವಿಭಾಗದಲ್ಲಿ ಮೊದಲ ಸಾಲಿನಲ್ಲಿಯೇ ಆಸೀನರಾಗಲಿದ್ದಾರೆ. ಇದಕ್ಕಾಗಿ ಪ್ರತ್ಯೇಕ ವ್ಯವಸ್ಥೆಯನ್ನೂ ಮಾಡಲಾಗಿದೆ. ಕಾಂಗ್ರೆಸ್ ನಿಂದ ಪಕ್ಷದ ವರಿಷ್ಠ ನಾಯಕಿ ಸೋನಿಯಾ ಗಾಂಧಿ, ಅಧ್ಯಕ್ಷ ರಾಹುಲ್ ಗಾಂಧಿಯವರೂ ಆಗಮಿಸಲಿದ್ದಾರೆ.
ಬಹುಜನ ಸಮಾಜ ಪಕ್ಷದ ಅಧಿನಾಯಕಿ ಮಾಯಾವತಿ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಜಮ್ಮು ಮತ್ತು ಕಾಶ್ಮೀರ ನ್ಯಾಷನಲ್ ಕಾನ್ಫರೆನ್ಸ್ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ, ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್, ಆರ್'ಜೆಡಿ ನಾಯಕ ತೇಜಸ್ವಿ ಯಾದವ್, ಉತ್ತರಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್, ಎನ್'ಸಿಪಿ ಮುಖ್ಯಸ್ಥ ಶರದ್ ಪವಾರ್, ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್, ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ, ತೆಲುಗು ನಟ ಪವನ್ ಕಲ್ಯಾಣ್ ಅವರು ಸಮಾರಂಭದಲ್ಲಿ ಭಾಗವಹಿಸಲಿದ್ದಾರೆಂದು ಮೂಲಗಳು ತಿಳಿಸಿವೆ.
ಹೆಚ್'ಡಿಕೆಗೆ ಕೆಸಿಆರ್ ಶುಭ ಹಾರೈಕೆ
ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡುತ್ತಿರುವ ಕುಮಾರಸ್ವಾಮಿಯವರನ್ನು ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರು ಭೇಟಿ ಮಾಡಿ ಮಂಗಳವಾರ ಅಭಿನಂದನೆ ಸಲ್ಲಿಸಿದರು.
ದೇವೇಗೌಡ ಅವರ ಪದ್ಮನಾಭನಗರ ನಿವಾಸಕ್ಕೆ ನಿನ್ನೆ ಸಂಜೆ ಆಗಮಿಸಿದ ಚಂದ್ರಶೇಖರ್ ರಾವ್ ಅವರು ಒಂದು ದಿನ ಮುಂಚಿತವಾಗಿಯೇ ಹೂಗುಚ್ಛ ನೀಡಿ ಶುಭಾಶಯ ಕೋರಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Congressಕಾಂಗ್ರೆಸ್JDSbjpಬಿಜೆಪಿModiಜೆಡಿಎಸ್ಮೋದಿHD. Kumaraswamyಹೆಚ್.ಡಿ. ಕುಮಾರಸ್ವಾಮಿKarnataka Assembly Electionಕರ್ನಾಟಕ ವಿಧಾನಸಭೆ ಚುನಾವಣೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


