ರಾಜಕೀಯ

ಕುಮಾರಸ್ವಾಮಿಯಿಂದ ರೈತ ಸಮುದಾಯಕ್ಕೆ ದ್ರೋಹ: ಕೆ.ಎಸ್.ಈಶ್ವರಪ್ಪ

ಚುನಾವಣಾ ಪೂರ್ವ ಆಶ್ವಾಸನೆಯಂತೆ ನಿಯೋಜಿತ ಮುಖ್ಯಮಂತ್ರಿ ಎಚ್.ಡಿ. ಕುಮಾರ ಸ್ವಾಮಿ ರೈತರ ...

ಕುಮಾರಸ್ವಾಮಿಯಿಂದ ರೈತ ಸಮುದಾಯಕ್ಕೆ ದ್ರೋಹ: ಕೆ.ಎಸ್.ಈಶ್ವರಪ್ಪ
ಕೆ.ಎಸ್.ಈಶ್ವರಪ್ಪ(ಸಂಗ್ರಹ ಚಿತ್ರ)
Published On :

ಬೆಂಗಳೂರು: ಚುನಾವಣಾ ಪೂರ್ವ ಆಶ್ವಾಸನೆಯಂತೆ ನಿಯೋಜಿತ ಮುಖ್ಯಮಂತ್ರಿ ಎಚ್.ಡಿ. ಕುಮಾರ ಸ್ವಾಮಿ ರೈತರ  ಸಾಲ ಮನ್ನಾ ಮಾಡಬೇಕು ಇಲ್ಲದಿದ್ದರೆ ಪ್ರಣಾಳಿಕೆಯಲ್ಲಿನ ಆಶ್ವಾಸನೆಗಳು ಹುಸಿಯಾಗಲಿದೆ ಎಂದು ಬಿಜೆಪಿ ನಾಯಕ ಕೆ.ಎಸ್. ಈಶ್ವರಪ್ಪ ಆಗ್ರಹಿಸಿದ್ದಾರೆ.

ಶಿವಮೊಗ್ಗದಲ್ಲಿ ನಿನ್ನೆ  ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಜೆಡಿಎಸ್, ಚುನಾವಣಾ ಪ್ರಣಾಳಿಕೆ ಕೇವಲ  ಬೋಗಸ್ ಆಗಿದ್ದು, ಕುಮಾರಸ್ವಾಮಿ ಒಬ್ಬ ಅವಕಾಶವಾದಿ ರಾಜಕಾರಣಿ ಎಂದು ದೂರಿದರು. ಸದ್ಯದಲ್ಲಿಯೇ ಅಧಿಕಾರಕ್ಕೆ ಬರಲಿರುವ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಎಷ್ಟು ದಿನ ನಡೆಯುತ್ತದೆ ಎನ್ನುವ ಖಾತರಿ ಇಲ್ಲ. ಈ ಮೈತ್ರಿಕೂಟ ಭಿನ್ನಾಭಿಪ್ರಾಯಗಳ ಆಗರವಾಗಲಿದೆ ಎಂದು ಅವರು ಟೀಕಿಸಿದರು.

ಪ್ರಮಾಣ ವಚನ ಸ್ವೀಕರಿಸುವ ಮೊದಲೇ ಕುಮಾರಸ್ವಾಮಿ ಪೂರ್ಣ ಬಹುಮತ ಇಲ್ಲದ ಕಾರಣ ರೈತರ ಸಾಲ ಮನ್ನಾ ಅಸಾಧ್ಯ ಎಂದು ಹೇಳಿರುವುದು ರಾಜ್ಯದ ರೈತ‌‌ ಸಮುದಾಯಕ್ಕೆ ಬಗೆದ ದ್ರೋಹ ಆರೋಪಿಸಿದರು.

ಎರಡೂ ಪಕ್ಷಗಳು ಪ್ರಣಾಳಿಕೆಯಲ್ಲಿ ನುಡಿದಂತೆ ನಡೆಯಬೇಕು. ಇಲ್ಲವೆ ರಾಜ್ಯದ ಜನರ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದರು.

ಕುಮಾರಸ್ವಾಮಿ‌ ವಿಶ್ವಾಸ ಮತ‌ಯಾಚನೆ ವೇಳೆ ಕಾಂಗ್ರೆಸ್ ಶಾಸಕರು ಆತ್ಮಸಾಕ್ಷಿಯ ಮತ ಚಲಾಯಿಸುವ ‌ಸಾಧ್ಯತೆ ಇದೆ. ಒಂದು ವೇಳೆ ಅಲ್ಲಿ ಜಯಿಸಿದರು ಈ ಸರ್ಕಾರದ ಆಯಸ್ಸು ಕೇವಲ 6 ತಿಂಗಳು’ ಎಂದು ಭವಿಷ್ಯ ನುಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.