ಸಿಎಂ ಕುಮಾರಸ್ವಾಮಿಗೆ ಪ್ರಧಾನಿ ನರೇಂದ್ರಮೋದಿ ಅವರಿಂದ ಅಭಿನಂದನೆ

ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿರುವ ಹೆಚ್. ಡಿ. ಕುಮಾರಸ್ವಾಮಿ ಅವರಿಗೆ ಪ್ರಧಾನಿ ನರೇಂದ್ರಮೋದಿ ಅಭಿನಂದನೆ ಸಲ್ಲಿಸಿದ್ದಾರೆ.
ಸಿಎಂ ಕುಮಾರಸ್ವಾಮಿ ಪ್ರಮಾಣ ವಚನ ಸ್ವೀಕಾರದ ಚಿತ್ರ
ಸಿಎಂ ಕುಮಾರಸ್ವಾಮಿ ಪ್ರಮಾಣ ವಚನ ಸ್ವೀಕಾರದ ಚಿತ್ರ

>ನವದೆಹಲಿ : ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿರುವ ಹೆಚ್. ಡಿ. ಕುಮಾರಸ್ವಾಮಿ ಅವರಿಗೆ ಪ್ರಧಾನಿ ನರೇಂದ್ರಮೋದಿ ಅಭಿನಂದನೆ ಸಲ್ಲಿಸಿದ್ದಾರೆ.

ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಹಾಗೂ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರಿಗೆ  ಟ್ವೀಟರ್ ಮೂಲಕ ನರೇಂದ್ರಮೋದಿ ಶುಭ ಹಾರೈಸಿದ್ದಾರೆ.

 ಜೆಡಿಎಸ್ - ಕಾಂಗ್ರೆಸ್ ಮೈತ್ರಿ ಸರ್ಕಾರದ ಮುಖ್ಯಮಂತ್ರಿಯಾಗಿ ಹೆಚ್. ಡಿ. ಕುಮಾರಸ್ವಾಮಿ ಇಂದು ಪದಗ್ರಹಣ ಮಾಡಿದರು. ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಲ್ಲಿ ರಾಷ್ಟ್ರಮಟ್ಟದ ಹಾಗೂ ವಿವಿಧ ಪ್ರಾದೇಶಿಕ ಪಕ್ಷಗಳ ನಾಯಕರು ಭಾಗವಹಿಸುವ ಮೂಲಕ ಬಿಜೆಪಿಗೆ ಸ್ಪಷ್ಪ ಸಂದೇಶ ರವಾನಿಸಿದರು.

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಎನ್ ಡಿಎಗೆ ಪರ್ಯಾಯವಾದ ಮೈತ್ರಿ ಕೂಟ ರಚನೆಯ ಸಂದೇಶವನ್ನು ಸಹ ಈ ನಾಯಕರು ದೇಶದ ಜನತೆಗೆ ತಲುಪಿಸಿದರು.



ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com