ವಿಧಾನಸೌಧದ ಮುಂದೆ ಹೆಚ್ ಡಿ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ತೆಗೆದುಕೊಂಡ ಸಂದರ್ಭದಲ್ಲಿ ಹೆಚ್ ಡಿ ದೇವೇಗೌಡ ಮತ್ತು ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ
ವಿಧಾನಸೌಧದ ಮುಂದೆ ಹೆಚ್ ಡಿ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ತೆಗೆದುಕೊಂಡ ಸಂದರ್ಭದಲ್ಲಿ ಹೆಚ್ ಡಿ ದೇವೇಗೌಡ ಮತ್ತು ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ

ಮೈತ್ರಿ ಸರ್ಕಾರ ರಚನೆ: ಮತ್ತೆ ರಾಷ್ಟ್ರ ರಾಜಕಾರಣದಲ್ಲಿ ಮಿಂಚಲಿದ್ದಾರೆಯೇ ದೊಡ್ಡ ಗೌಡರು?

ಹೆಚ್ ಡಿ ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರದಿಂದಾಗಿ ಜೆಡಿಎಸ್ ವರಿಷ್ಠ ಮಾಜಿ ಪ್ರಧಾನಿ ...

ಬೆಂಗಳೂರು: ಹೆಚ್ ಡಿ ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರದಿಂದಾಗಿ ಜೆಡಿಎಸ್ ವರಿಷ್ಠ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು ಮತ್ತೊಮ್ಮೆ ರಾಷ್ಟ್ರಮಟ್ಟದ ರಾಜಕಾರಣದಲ್ಲಿ ಮಿಂಚುತ್ತಿದ್ದಾರೆ.

ನಿನ್ನೆ ವಿಧಾನಸೌಧದ ಮುಂದೆ ನಡೆದ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಪ್ರಾದೇಶಿಕ ಪಕ್ಷಗಳ ರಾಷ್ಟ್ರೀಯ ನಾಯಕರ ಉಪಸ್ಥಿತಿ, ಮುಂದಿನ ವರ್ಷ ನಡೆಯುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ವಿರುದ್ಧವಾಗಿ ರಾಷ್ಟ್ರಮಟ್ಟದಲ್ಲಿ ಮೈತ್ರಿ ಮಾಡಿಕೊಂಡು ಚುನಾವಣೆಯನ್ನು ಎದುರಿಸುವಲ್ಲಿ ಹೆಚ್ ಡಿ ದೇವೇಗೌಡರು ಮುಖ್ಯ ಪಾತ್ರ ವಹಿಸಲಿದ್ದಾರೆ ಎಂಬುದನ್ನು ತೋರಿಸುತ್ತಿತ್ತು.

ಪ್ರಧಾನಿಯಾಗಿ ಅಲ್ಪಾವಧಿ ಅಧಿಕಾರಾವಧಿ ವಹಿಸಿದ ನಂತರ ಮತ್ತು ರಾಷ್ಟ್ರ ರಾಜಕಾರಣದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿಯನ್ನು ಎದುರಿಸಲು ತೃತೀಯ ರಂಗ ರಚನೆ ಸಾಧ್ಯವಾಗದೆ ಹೋದಾಗ ಜೆಡಿಎಸ್ ವರಿಷ್ಠ ದೇವೇಗೌಡರು ತಮ್ಮ ರಾಜಕೀಯವನ್ನು ಕೇವಲ ಕರ್ನಾಟಕಕ್ಕೆ ಸೀಮಿತಗೊಳಿಸಿದ್ದರು. ಈ ಬಾರಿಯ ವಿಧಾನಸಭೆ ಚುನಾವಣೆಗೆ ಮುನ್ನ ಹಲವು ಸಂದರ್ಭಗಳಲ್ಲಿ ರಾಜ್ಯದಲ್ಲಿ ಜೆಡಿಎಸ್ ನ್ನು ಅಧಿಕಾರಕ್ಕೆ ತರುವುದು ತಮ್ಮ ಮೊದಲ ಆದ್ಯತೆ ಎಂದು ಹೇಳಿದ್ದರು. ನಂತರವಷ್ಟೇ ರಾಷ್ಟ್ರ ರಾಜಕಾರಣದ ಬಗ್ಗೆ ಗಮನ ಹರಿಸುತ್ತೇನೆ ಎಂದು ಹೇಳಿದ್ದರು.

ಇದೀಗ ಅವರ ಪಕ್ಷ ಅಧಿಕಾರಕ್ಕೆ ಬಂದಿದೆ. ಅವರ ಪುತ್ರ ಹೆಚ್ ಡಿ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾರೆ. ಇನ್ನು ದೇವೇಗೌಡರು ರಾಷ್ಟ್ರ ಮಟ್ಟದ ರಾಜಕಾರಣದಲ್ಲಿ ಹೆಚ್ಚು ಸಕ್ರಿಯರಾಗಿ ತೊಡಗಿಸಿಕೊಳ್ಳಲಿದ್ದಾರೆ. ಇದಕ್ಕೆ ಸ್ಪಷ್ಟ ಸಂದೇಶ ನಿನ್ನೆ ನಡೆದ ಕುಮಾರಸ್ವಾಮಿ ಪ್ರಮಾಣವಚನ ಸಮಾರಂಭದಲ್ಲಿ ಸಿಕ್ಕಿತ್ತು. ಬಿಜೆಪಿಯೇತರ ಸರ್ಕಾರಗಳಿರುವ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ರಾಷ್ಟ್ರಮಟ್ಟದಲ್ಲಿ ಹೆಸರು ಮಾಡಿರುವ ಬಿಎಸ್ ಪಿ, ಎಸ್ ಪಿ, ಆರ್ ಜೆಡಿ ನಾಯಕರು ಪ್ರಮಾಣವಚನದಲ್ಲಿ ಭಾಗಿಯಾಗಿ ತಮ್ಮ ಒಗ್ಗಟ್ಟಿನ ಶಕ್ತಿ ಪ್ರದರ್ಶಿಸಿದ್ದರು.

ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹೆಚ್ ಡಿ ಕುಮಾರಸ್ವಾಮಿ ಪ್ರಮಾಣವಚನ ಸಮಾರಂಭದಲ್ಲಿ ರಾಷ್ಡ್ರ ಮತ್ತು ಪ್ರಾದೇಶಿಕ ಪಕ್ಷಗಳ ನಾಯಕರು ಭಾಗವಹಿಸುವ ಮೂಲಕ 2019ರ ಲೋಕಸಭೆ ಚುನಾವಣೆಗೆ ಮುನ್ನ ರಾಷ್ಟ್ರಮಟ್ಟದಲ್ಲಿ ಎಲ್ಲಾ ಪ್ರಾದೇಶಿಕ ಪಕ್ಷಗಳ ಸೇರ್ಪಡೆಯ ಸ್ಪಷ್ಟ ಸಂದೇಶ ನೀಡಿದ್ದೇವೆ ಎಂದರು.

ದೇವೇಗೌಡರು ಹಿರಿಯ ರಾಜಕಾರಣಿ. ಅವರಿಗೆ ದೇಶಾದ್ಯಂತ ಸ್ಥಳೀಯ ರಾಜಕೀಯ ನಾಯಕರು ಗೌರವ ನೀಡುತ್ತಾರೆ. ರಾಷ್ಟ್ರಮಟ್ಟದಲ್ಲಿ ಬಿಜೆಪಿಯನ್ನು ಎದುರಿಸಲು ಎಲ್ಲಾ ಪ್ರಾದೇಶಿಕ ಪಕ್ಷಗಳನ್ನು ಒಟ್ಟು ತರುವ ನಾಯಕತ್ವವನ್ನು ಅವರು ವಹಿಸಬಹುದು ಎನ್ನುತ್ತಾರೆ ರಾಜಕೀಯ ವಿಶ್ಲೇಷಕ ಪ್ರೊ.ಹರೀಶ್ ರಾಮಸ್ವಾಮಿ.

Related Stories

No stories found.

Advertisement

X
Kannada Prabha
www.kannadaprabha.com