ಬಿಜೆಪಿ ಸಭಾತ್ಯಾಗದ ನಡುವೆ ವಿಶ್ವಾಸ ಗೆದ್ದ 'ಕುಮಾರ'ಸ್ವಾಮಿ

ಮೇ.23 ರಂದು ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿದ್ದ ಹೆಚ್ ಡಿ ಕುಮಾರಸ್ವಾಮಿ ವಿಧಾನಸಭೆಯಲ್ಲಿ ಮೇ.25 ರಂದು ವಿಶ್ವಾಸ ಮತ ಸಾಬೀತುಪಡಿಸಿದ್ದಾರೆ.
ಸಿಎಂ ಹೆಚ್ ಡಿ ಕುಮಾರಸ್ವಾಮಿ
ಸಿಎಂ ಹೆಚ್ ಡಿ ಕುಮಾರಸ್ವಾಮಿ
Updated on: 
ಮೇ.23 ರಂದು ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿದ್ದ ಹೆಚ್ ಡಿ ಕುಮಾರಸ್ವಾಮಿ ವಿಧಾನಸಭೆಯಲ್ಲಿ ಮೇ.25 ರಂದು ವಿಶ್ವಾಸ ಮತ ಸಾಬೀತುಪಡಿಸಿದ್ದಾರೆ. 
ವಿಶ್ವಾಸ ಮತ ಯಾಚನೆಗೂ ಮುನ್ನ ಹೆಚ್ ಡಿ ಕುಮಾರಸ್ವಾಮಿ ಹಾಗೂ ವಿರೋಧಪಕ್ಷದ ನಾಯಕ ಯಡಿಯೂರಪ್ಪ ಸದನದಲ್ಲಿ ಸುದೀರ್ಘ ಭಾಷಣ ಮಾಡಿದರು, ನಂತರ ಸ್ಪೀಕರ್ ರಮೇಶ್ ಕುಮಾರ್ ಅವರು ವಿಶ್ವಾಸಮತ ಪ್ರಸ್ತಾವನೆಯನ್ನು ಮತಕ್ಕೆ ಹಾಕಿದರು. ಈ ವೇಳೆ ಸದನದಲ್ಲಿದ್ದ ಕಾಂಗ್ರೆಸ್ ಜೆಡಿಎಸ್ ನ 116 ಸದಸ್ಯರು ಕುಮಾರಸ್ವಾಮಿ ಸರ್ಕಾರದ ಪರವಾಗಿ ಮತಚಲಾಯಿಸಿದರು. 
ಇದಕ್ಕೂ ಮುನ್ನ ಭಾಷಣ ಮಾಡಿ ಜೆಡಿಎಸ್ ವಿರುದ್ಧ ವಾಗ್ದಾಳಿ ನಡೆಸಿದ್ದ ಯಡಿಯೂರಪ್ಪ ಭಾಷಣ ಮುಕ್ತಾಯಗೊಳಿಸುತ್ತಿದ್ದಂತೆಯೇ ಬಿಜೆಪಿ ಸದಸ್ಯರು ಸಭಾತ್ಯಾಗ ಮಾಡಿದರು. ಕುಮಾರಸ್ವಾಮಿ ಅವರು ಬಹುಮತ ಸಾಬೀತುಪಡಿಸಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ಕನಿಷ್ಟ 6 ತಿಂಗಳುಗಳ ಕಾಲ ಸುಭದ್ರವಾಗಿರಲಿದ್ದು, ಶೀಘ್ರವೇ ಸಂಪುಟ ರಚನೆಯಾಗಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com