ಆರ್.ಆರ್.ನಗರ, ಜಯನಗರ ಚುನಾವಣೆ: ಹೆಚ್'ಡಿಕೆ, ಡಿಕೆಶಿ ಸಂಧಾನ ಸಭೆ ವಿಫಲ

ರಾಜರಾಜೇಶ್ವರಿ ನಗರ, ಜಯನಗರ ವಿಧಾನಸಭಾ ಕ್ಷೇತ್ರ ಚುನಾವಣೆಯಲ್ಲಿ ಹೊಂದಾಣಿಕೆ ಮಾಡಿಕೊಳ್ಳುವ ಒಮ್ಮತ ನಿರ್ಧಾರ ಕೈಗೊಳ್ಳುವಲ್ಲಿ ಕಾಂಗ್ರೆಸ್-ಜೆಡಿಎಸ್ ವಿಫಲವಾಗಿದ್ದು, ಇದೇ ವಿಚಾರ ರಾಜ್ಯ ಸರ್ಕಾರಕ್ಕೆ ಕಗ್ಗಂಟಾಗಿ ಪರಿಣಮಿಸುವ ಎಲ್ಲಾ ಲಕ್ಷಣಗಳು ಕಂಡು ಬರುತ್ತಿದೆ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಬೆಂಗಳೂರು; ರಾಜರಾಜೇಶ್ವರಿ ನಗರ, ಜಯನಗರ ವಿಧಾನಸಭಾ ಕ್ಷೇತ್ರ ಚುನಾವಣೆಯಲ್ಲಿ ಹೊಂದಾಣಿಕೆ ಮಾಡಿಕೊಳ್ಳುವ ಒಮ್ಮತ ನಿರ್ಧಾರ ಕೈಗೊಳ್ಳುವಲ್ಲಿ ಕಾಂಗ್ರೆಸ್-ಜೆಡಿಎಸ್ ವಿಫಲವಾಗಿದ್ದು, ಇದೇ ವಿಚಾರ ರಾಜ್ಯ ಸರ್ಕಾರಕ್ಕೆ ಕಗ್ಗಂಟಾಗಿ ಪರಿಣಮಿಸುವ ಎಲ್ಲಾ ಲಕ್ಷಣಗಳು ಕಂಡು ಬರುತ್ತಿದೆ. 
ರಾಜ್ಯದಲ್ಲಿ ಸರ್ಕಾರ ರಚನೆ ಮಾಡುವಲ್ಲಿ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಬರುವ ಸೋಮವಾರ ನಡೆಯಲಿರುವ ಎರಡು ವಿಧಾನಸಭಾ ಕ್ಷೇತ್ರಗಳ ಚುನಾವಣೆಯಲ್ಲಿ ಹೊಂದಾಣಿಕೆ ಮಾಡಿಕೊಳ್ಳಲು ಉಭಯ ಪಕ್ಷಗಳ ಅಭ್ಯರ್ಥಿಗಳು ನಕಾರ ವ್ಯಕ್ತಪಡಿಸುತ್ತಿದ್ದಾರೆ. 
ಮೈತ್ರಿ ಸರ್ಕಾರ ರಚನೆಯಾದ ಬೆನ್ನಲ್ಲೇ ಚುನಾವಣೆ ಹೊಂದಾಣಿಕೆಯಲ್ಲಿ ಒಡಕು ಮೂಡಿದ್ದು, ಈ ಕುರಿತು ಇಂದು ಸ್ಪಷ್ಟ ಚಿತ್ರಣಗಳು ಹೊರಬೀಳುವ ನಿರೀಕ್ಷೆಗಳಿವೆ. 
ನಿನ್ನೆಯಷ್ಟೇ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಕಾಂಗ್ರೆಸ್ ನಾಯಕ ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾ ದಲ್ಲಿ ಸಂಧಾನ ಸಭೆ ನಡೆಸಿದ್ದರು. ರಾಜರಾಜೇಶ್ವರಿ ನಗರದಲ್ಲಿ ಬಿಜೆಪಿಯನ್ನು ಮಣಿಸಲು ಹೊಂದಾಣಿಕೆ ಮಾಡಿಕೊಳ್ಳುವ ಚರ್ಚೆಯು ಯಾವುದೇ ಫಲಕಾರಿ ನೀಡದ ಕಾರಣ, ಈ ಸಂಧಾನ ಸಭೆ ವಿಫಲಗೊಂಡಿದೆ. 
ಕಾಂಗ್ರೆಸ್ ಅಭ್ಯರ್ಥಿ ಮುನಿರತ್ನ ಮತ್ತು ಜೆಡಿಎಸ್ ಅಭ್ಯರ್ಥಿ ರಾಮಚಂದ್ರ ಇಬ್ಬರೂ ಸಹ ಸಭೆಯಲ್ಲಿ ಸಂಧಾನಕ್ಕೆ ಸಹಮತ ವ್ಯಕ್ತಪಡಿಸಿಲ್ಲ ಇದು ನಾಯಕರನ್ನು ಇಕ್ಕಟ್ಟಿಗೆ ಸಿಲುವಂತೆ ಮಾಡಿದೆ. 
ಚುನಾವಣಾ ಕಣದಿಂದ ಹಿಂದಕ್ಕೆ ಸರಿಯಲು ಇಬ್ಬರೂ ನಾಯಕರು ನಿರಾಕರಿಸುತ್ತಿದ್ದಾರೆ. ಈ ಹಿನ್ನಲೆಯಲ್ಲು ಇಂದು ಬಹುಮತ ಸಾಬೀತುಪಡಿಸಿದ ಬಳಿಕ ಮತ್ತೊಂದು ಸುತ್ತಿನ ಸಭೆ ನಡೆಸಲು ಎರಡೂ ಪಕ್ಷ ಮುಖಂಡರು ತೀರ್ಮಾನಿಸಿದ್ದಾರೆಂದು ತಿಳಿದುಬಂದಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com