ಮಾಜಿ ಶಾಸಕ ಮುನಿರತ್ನ ಬಳಿಕ ಬಿಜೆಪಿ ಅಭ್ಯರ್ಥಿಗೂ ಬಂಧನ ಭೀತಿ!

ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮುನಿರತ್ನಗೆ ಬಂಧನ ಭೀತಿ ಎದುರಾಗಿದ್ದ ಬೆನ್ನಲ್ಲೇ ಇದೀಗ ಬಿಜೆಪಿ ಅಭ್ಯರ್ಥಿ ತುಳುಸಿ ಮುನಿರಾಜು ಅವರಿಗೂ ಬಂಧನ ಭೀತಿ ಶುರುವಾಗಿದೆ...
ತುಳಸಿ ಮುನಿರಾಜು-ಆಡ್ವಾಣಿ
ತುಳಸಿ ಮುನಿರಾಜು-ಆಡ್ವಾಣಿ
ಬೆಂಗಳೂರು: ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮುನಿರತ್ನಗೆ ಬಂಧನ ಭೀತಿ ಎದುರಾಗಿದ್ದ ಬೆನ್ನಲ್ಲೇ ಇದೀಗ ಬಿಜೆಪಿ ಅಭ್ಯರ್ಥಿ ತುಳುಸಿ ಮುನಿರಾಜು ಅವರಿಗೂ ಬಂಧನ ಭೀತಿ ಶುರುವಾಗಿದೆ. 
ತುಳಸಿ ಮುನಿರಾಜು ವಿರುದ್ಧ 2014ರ ಹಳೆಯ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಲಯ ಜಾಮೀನು ರಹಿತ ಬಂಧನ ವಾರೆಂಟ್ ಜಾರಿಗೊಳಿಸಿದೆ. 
2014ರಲ್ಲಿ ಕೆಎಸ್ಆರ್ಟಿಸಿ ಮತ್ತು ಬಿಎಂಟಿಸಿ ಬಸ್ ದರ ಇಳಿಸುವಂತೆ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಾಗಿದ್ದ ತುಳಸಿ ಮುನಿರಾಜು ಪ್ರತಿಭಟನೆ ನಡೆಸಿದ್ದರು. ಶಾಂತಿನಗರದ ಬಿಎಂಟಿಸಿ ಕಟ್ಟಡಕ್ಕೆ ನುಗ್ಗಲು ಯತ್ನಿಸಿ ಕರ್ತವ್ಯ ನಿರತ ಪೊಲೀಸ್ ಅಧಿಕಾರಿಗಳಿಗೆ ಅಡ್ಡಿಪಡಿಸಿದ್ದರು. 
ಈ ವೇಳೆ ಕೆಲವು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದರು. ಈ ಸಂಬಂಧ ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಆಗಿದ್ದ ಬೋರೇಗೌಡ ಅವರು ತುಳಸಿ ಮುನಿರಾಜು ವಿರುದ್ಧ ಪ್ರಕರಣ ದಾಖಲಿಸಿದ್ದರು. ಈ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಹಲವು ಬಾರಿ ನೋಟಿಸ್ ನೀಡಿದ್ದರೂ ಹಾಜರಾಗದಿದ್ದರಿಂದ ಎಪಿಎಂಸಿ ನ್ಯಾಯಾಲಯ ಬಂಧನ ಆದೇಶ ಜಾರಿಗೊಳಿಸಿದ್ದು ಮೇ 30ರಯೊಳಗೆ ಮುನಿರಾಜು ಅವರನ್ನು ಬಂಧಿಸಿ ಕೋರ್ಟ್ ಮುಂದೆ ಹಾಜರು ಪಡಿಸುವಂತೆ ಆದೇಶಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com