ನವದೆಹಲಿ: ಹೊಸದಾಗಿ ಆಯ್ಕೆಯಾಗಿರುವ ಕರ್ನಾಟಕ ಮುಖ್ಯಮಂತ್ರಿ ಎಚ್.ಡಿ ಕುಮಾರ ಸ್ವಾಮಿ ಇಂದು ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲಿದ್ದಾರೆ.
ಕಾಂಗ್ರೆಸ್- ಜೆಡಿಎಸ್ ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಮೊದಲ ಬಾರಿಗೆ ಪ್ರಧಾನಿ ಅವರನ್ನು ಸಿಎಂ ಭೇಟಿ ಮಾಡುತ್ತಿದ್ದಾರೆ.
ಪ್ರಧಾನಿ ಭೇಟಿ ನಂತರ ರಾಜಘಾಟ್ ಗೆ ತೆರಳಿ ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ ಸಮಾಧಿಗೆ ಪುಷ್ಪ ನಮನ ಸಲ್ಲಿಸಲಿದ್ದಾರೆ, ಬೆಂಗಳೂರಿಗೆ ವಾಪಾಸಾದ ನಂತರ ಕುಮಾರ ಸ್ವಾಮಿ ಸಂಪುಟ ವಿಸ್ತರಣೆ ಮಾಡಲಿದ್ದಾರೆ ಎಂದು ಹೇಳಲಾಗಿದೆ,
ಮೈತ್ರಿಸರ್ಕಾರದ ಖಾತೆ ಹಂಚಿಕೆ ಪ್ರಕ್ರಿಯೆಯನ್ನು ಒಂದೆರಡು ದಿನಗಳೊಳಗೆ ಅಂತಿಮಗೊಳಿಸಲಾಗುವುದು ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ. ಸಿ. ವೇಣುಗೋಪಾಲ್ ತಿಳಿಸಿದ್ದಾರೆ.