ಆರ್ ಆರ್ ನಗರ ವಿಧಾನಸಭಾ ಕ್ಷೇತ್ರ ಫಲಿತಾಂಶ: ಗೆಲುವಿನ ಸನಿಹದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮುನಿರತ್ನ

ನಗರದ ಪ್ರತಿಷ್ಠಿತ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಚುನಾವಣೆಯ ಮತ ಎಣಿಕೆ ...
ಮುನಿರತ್ನ
ಮುನಿರತ್ನ
Updated on

ಬೆಂಗಳೂರು: ನಗರದ ಪ್ರತಿಷ್ಠಿತ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಚುನಾವಣೆಯ ಮತ ಎಣಿಕೆಯ 13ನೇ ಸುತ್ತು ಮುಗಿದಿದ್ದು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಮುನಿರತ್ನ97,440 ಮತಗಳನ್ನು ಪಡೆದಿದ್ದಾರೆ.

ಮುನಿರತ್ನ ಅವರು 14ನೇ ಸುತ್ತಿನಲ್ಲಿ 97,440 ಮತಗಳ ಅಂತರದಲ್ಲಿ ಮುನ್ನಡೆ ಕಂಡಿದ್ದಾರೆ. ಬಿಜೆಪಿಯ ಮುನಿರಾಜು ಗೌಡ 56,278  ಮತಗಳನ್ನು ಪಡೆದರೆ ಜೆಡಿಎಸ್ ನ ರಾಮಚಂದ್ರ 45,345 ಮತಗಳನ್ನು ಪಡೆದುಕೊಂಡಿದ್ದಾರೆ.

ಮುನಿರತ್ನ ಅವರು ಎರಡನೇ ಬಾರಿಗೆ ಶಾಸಕರಾಗುವುದು ಬಹುತೇಕ ಖಚಿತವಾಗಿದ್ದು, ಇನ್ನೇನಿದ್ದರೂ ಚುನಾವಣಾ ಆಯೋಗದ ಅಧಿಕೃತ ಘೋಷಣೆಯಷ್ಟೇ ಬಾಕಿ ಉಳಿದಿದೆ.
ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮ ಮುಗಿಲು ಮುಟ್ಟಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com