ಉಪ ಸಮರದಲ್ಲಿ ಮೈತ್ರಿಗೆ ಗೆಲುವು: ರಾಜ್ಯದ ಜನತೆಗೆ ಟ್ವಿಟ್ಟರ್ ಮೂಲಕ ಧನ್ಯವಾದ ಹೇಳಿದ ದೇವೇಗೌಡ
ಎರಡು ವಿಧಾನಸಭೆ, ಮೂರು ಲೋಕಸಭೆ ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ ಮತದಾರರು ಜೆಡಿಎಸ್-ಕಾಂಗ್ರೆಸ್ ಮೈತ್ರಿಗೆ ಜೈ ಎಂದಿದ್ದಾರೆ. ಇದಕ್ಕೆ ಪ್ರಕ್ತಿಕ್ರಯಿಸಿರುವ ಮಾಜಿ ಪ್ರಧಾನಿ ದೇವೇಗೌಡ....
ಬೆಂಗಳೂರು: ಎರಡು ವಿಧಾನಸಭೆ, ಮೂರು ಲೋಕಸಭೆ ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ ಮತದಾರರು ಜೆಡಿಎಸ್-ಕಾಂಗ್ರೆಸ್ ಮೈತ್ರಿಗೆ ಜೈ ಎಂದಿದ್ದಾರೆ. ಇದಕ್ಕೆ ಪ್ರಕ್ತಿಕ್ರಯಿಸಿರುವ ಮಾಜಿ ಪ್ರಧಾನಿ ದೇವೇಗೌಡ "ಕರ್ನಾಟಕಕ್ಕೆ ಧನ್ಯವಾದ" ಎಂದು ಟ್ವೀಟ್ ಮಾಡಿದ್ದಾರೆ.
"ಮೈತ್ರಿ ಸರ್ಕಾರಕ್ಕೆ ಉಪಚುನಾವಣೆಯಲ್ಲಿ ಗೆಲುವು ದಕ್ಕಿಸಿಕೊಟ್ಟ ಮತದಾರರಿಗೆ ಅಭಿನಂದನೆ ಸಲ್ಲಿಸಿದ ದೇವೇಗೌಡ "ಅಭಿವೃದ್ಧಿ ಕೇಂದ್ರಿತ ಆಡಳಿತವನ್ನು ಬೆಂಬಲಿಸುತ್ತಿರುವ ರಾಜ್ಯದ ಜನತೆಗೆ ನನ್ನ ಅಭಿನಂದನೆಗಳು.
"ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರವನ್ನು ಅಸ್ಥಿರಗೊಳಿಸಲು ಮುಂದಾಗುವವರಿಗೆ ಜನರೇ ಉತ್ತರ ನೀಡಿದ್ದಾರೆ." ಎಂದು ಟ್ವೀಟ್ ಮಾಡಿದ್ದಾರೆ.
ಅಭಿವೃದ್ಧಿ ಕೇಂದ್ರಿತ ಆಡಳಿತವನ್ನು ಬೆಂಬಲಿಸುತ್ತಿರುವ ರಾಜ್ಯದ ಜನತೆಗೆ ನನ್ನ ಅಭಿನಂದನೆಗಳು. ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರವನ್ನು ಅಸ್ಥಿರಗೊಳಿಸಲು ಮುಂದಾಗುವವರಿಗೆ ಜನರೇ ಉತ್ತರ ನೀಡಿದ್ದಾರೆ.#ThankYouKarnataka
ಕೋಮುವಾದಿಗಳನ್ನು ಅಧಿಕಾರದಿಂದ ದೂರವಿಡುವುದಕ್ಕಾಗಿ ನಾವು ಒಟ್ಟಾಗಿದ್ದೇವೆ ಎಂದಿದ್ದ ದೇವೇಗೌಡ ಚುನಾವಣೆ ಪ್ರಚಾರದ ವೇಳೆ ಮೋದಿಗೆ ನಾವು ಈ ಚುನಾವಣೆಯ ಮೂಲಕ ಸ್ಪಷ್ಟ ಸಂದೇಶ ರವಾನಿಸಲಿದ್ದೇವೆ ಎಂದು ಹೇಳಿದ್ದರು.