ಬೆಂಗಳೂರು: ಕರ್ನಾಟಕ ಉಪಚುನಾವಣೆಯಲ್ಲಿ ಬಿಜೆಪಿ ನಾಲ್ಕು ಸ್ಥಾನಗಳಲ್ಲಿ ಸೋಲು ಕಂಡಿದ್ದು ಈ ಮಧ್ಯೆಯೂ ಬಿಜೆಪಿ ಈಗಲೂ ಆಪರೇಷನ್ ಕಮಲ ಮುಂದುವರಿಸಿದೆ ಎಂದು ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಗಂಭೀರ ಆರೋಪ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಶಿರಾ, ಪಿರಿಯಾಪಟ್ಟಣ ಶಾಸಕರನ್ನು ಬಿಜೆಪಿ ಸಂಪರ್ಕಿಸಿ, ನಮ್ಮ ಶಾಸಕರಿಗೆ ಕೋಟಿ ಕೋಟಿ ಹಣದ ಆಮಿಷ ಒಡುತ್ತಿದ್ದಾರೆ. ಈ ಮೂಲಕ ಮತ್ತೆ ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನವನ್ನು ಬಿಜೆಪಿ ಮುಂದೂವರೆಸಿದೆ ಎಂದು ಹೇಳಿದರು.
ಲೋಕಸಭೆ ಹಾಗೂ ಕರ್ನಾಟಕ ಉಪ ಚುನಾವಣೆಯಲ್ಲಿ 5 ಕ್ಷೇತ್ರಗಳ ಪೈಕಿ 4 ಕ್ಷೇತ್ರಗಳಲ್ಲಿ ಮೈತ್ರಿ ಸರ್ಕಾರದ ಅಭ್ಯರ್ಥಿಗಳು ಗೆದ್ದಿದ್ದಾರೆ. ಆ ಮೂಲಕ ಮೈತ್ರಿ ಸರ್ಕಾರವನ್ನು ಮತದಾರರು ಬೆಂಬಲಿಸಿದ್ದಾರೆ. ಇನ್ನು ಶಿವಮೊಗ್ಗದಲ್ಲಿ ಜೆಡಿಎಸ್ ಅಭ್ಯರ್ಥಿ ಸೋಲಿನ ಕುರಿತಂತೆ ನಾವು ಅಲ್ಲಿ ಅರ್ಧ ಚುನಾವಣೆಯನ್ನು ಗೆದ್ದಿದ್ದೇವೆ. ನಮ್ಮ ಅಭ್ಯರ್ಥಿ ಮಧು ಬಂಗಾರಪ್ಪ ಅವರು ಬಿಜೆಪಿ ರಾಷ್ಟ್ರಾಧ್ಯಕ್ಷ ಯಡಿಯೂರಪ್ಪನವರ ಪುತ್ರ ಬಿವೈ ರಾಘವೇಂದ್ರ ಅವರಿಗೆ ಪ್ರಬಲ ಸ್ಪರ್ಧೆ ನೀಡಿದ್ದು ಅಲ್ಪ ಮತಗಳಿಂದ ಸೋತಿದ್ದೇವೆ ಅಷ್ಟೆ ಎಂದರು.
ಇನ್ನು ಮುಂದಿನ ಲೋಕಸಭೆ ಚುನಾವಣೆಗೆ ದೋಸ್ತಿ ಸರ್ಕಾರದ ಜತೆ ಮಾತುಕಡೆ ನಡೆಸಿ ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.