ಸರ್ವಾಧಿಕಾರಿ ಧೋರಣೆಗೆ ಮತದಾರರು ತಕ್ಕ ಪಾಠ ಕಲಿಸಿದ್ದಾರೆ: ಪ್ರಧಾನಿ ಮೋದಿ, ಬಿಜೆಪಿ ವಿರುದ್ಧ ಉಗ್ರಪ್ಪ ವಾಗ್ದಾಳಿ

ಲೋಕಸಭಾ ಉಪಚುನಾವಣೆಯಲ್ಲಿ ಬಳ್ಳಾರಿ ಕ್ಷೇತ್ರದಿಂದ ಶಾಸಕ ಶ್ರೀರಾಮುಲು ಸಹೋದರಿ ಶಾಂತ ವಿರುದ್ಧ ಭರ್ಜರಿ ಗೆಲುವು ಸಾಧಿಸಿರುವ ಕಾಂಗ್ರೆಸ್ ಅಭ್ಯರ್ಥಿ ಉಗ್ರಪ್ಪ ಅವರು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು...
ವಿಎಸ್ ಉಗ್ರಪ್ಪ
ವಿಎಸ್ ಉಗ್ರಪ್ಪ
ಬೆಂಗಳೂರು: ಲೋಕಸಭಾ ಉಪಚುನಾವಣೆಯಲ್ಲಿ ಬಳ್ಳಾರಿ ಕ್ಷೇತ್ರದಿಂದ ಶಾಸಕ ಶ್ರೀರಾಮುಲು ಸಹೋದರಿ ಶಾಂತ ವಿರುದ್ಧ ಭರ್ಜರಿ ಗೆಲುವು ಸಾಧಿಸಿರುವ ಕಾಂಗ್ರೆಸ್ ಅಭ್ಯರ್ಥಿ ಉಗ್ರಪ್ಪ ಅವರು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. 
ಚುನಾವಣೆಯಲ್ಲಿ ಗೆದ್ದ ಬಳಿಕ ಮಾತನಾಡಿದ ಉಗ್ರಪ್ಪ ಅವರು ಕಾಂಗ್ರೆಸ್ ಹಾಗೂ ಜೆಡಿಎಸ್ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸಿದರು. ಕ್ಷೇತ್ರದ ಮತದಾರರು ವಿಶ್ವಾಸವಿಟ್ಟು ನನಗೆ ಮತ ನೀಡಿದ್ದಾರೆ. ಬಳ್ಳಾರಿ ಜನತೆಯ ನೈಜಪ್ರತಿನಿಧಿಯಾಗಿ ಕೆಲಸ ಮಾಡುತ್ತೇನೆ. ಸರ್ವಾಧಿಕಾರಿ ಧೋರಣೆ ತೋರುತ್ತಿದ್ದವರಿಗೆ ಮತದಾರರು ತಕ್ಕ ಪಾಠ ಕಲಿಸಿದ್ದಾರೆ. ಮತದಾರರ ತೀರ್ಪು ಮುಂದಿನ ಲೋಕಸಭಾ ಚುನಾವಣೆಗೆ ದಾರಿ ದೀಪವಾಗಲಿದೆ ಎಂದರು. 
ಜನವಿರೋಧಿ ಪ್ರವೃತ್ತಿ ತೋರುವವರಿಗೆ ಸೋಲಾಗಿದೆ. ಜಿಎಸ್ ಟಿ, ನೋಟ್ ಬ್ಯಾನ್ ನಿಂದ ದೇಶದ ಜನತೆಗೆ ಸಂಕಷ್ಟ ಎದುರಿಸಿದ್ದಾರೆ. ಕಚ್ಚಾತೈಲ ಬೆಲೆ ಕಡಿಮೆ ಇದ್ದರೂ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆಯಾಗಿದೆ. ಇದರಿಂದ ಬೇಸತ್ತು ಮತದಾರರು ಕಾಂಗ್ರೆಸ್ ಗೆ ಮತ ಗೆಲ್ಲಿಸಿದ್ದಾರೆ ಎಂದರು.
ಲೋಕಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿಎಸ್ ಉಗ್ರಪ್ಪ ಅವರು 5,88,863 ಮತ ಗಳಿಸಿದರೆ ಬಿಜೆಪಿ ಅಭ್ಯರ್ಥಿ ಜೆ ಶಾಂತ ಅವರು 3,60,608 ಮತಗಳನ್ನು ಪಡೆದಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com