
ಶಿವಮೊಗ್ಗ: ಮುಂದಿನ ಲೋಕಸಭಾ ಚುನಾವಣೆಯಲ್ಲಿ ಗೆಲ್ಲುವುದೇ ನಮ್ಮ ಗುರಿಯಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಶಿವಮೊಗ್ಗ ಲೋಕಸಭಾ ಕ್ಷೇತ್ರದ ವಿಜೇತ ಅಭ್ಯರ್ಥಿ ಬಿ. ವೈ. ರಾಘವೇಂದ್ರ ಅವರಿಗೆ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಯಡಿಯೂರಪ್ಪ, ಉಪಚುನಾವಣೆಯಲ್ಲಿ ಸ್ವಲ್ಪ ಮಟ್ಟಿಗೆ ಹಿನ್ನಡೆ ಆಗಿದ್ದರೂ ಮುಂದಿನ ಚುನಾವಣೆಯಲ್ಲಿ ಬಿಜೆಪಿ ಅತಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲುವ ಮೂಲಕ ನರೇಂದ್ರ ಮೋದಿ ಅವರನ್ನು ಮತ್ತೆ ಪ್ರಧಾನಿಯನ್ನಾಗಿ ಮಾಡುವುದೇ ನಮ್ಮ ಗುರಿ ಎಂದರು.
Advertisement