ಟಿಪ್ಪು ಬಗ್ಗೆ ತಿಳಿದುಕೊಳ್ಳಬೇಕಾಗಿರುವುದು ವೈರಿಗಳಾಗಿದ್ದ ಬ್ರಿಟಿಷ್ ಇತಿಹಾಸಕಾರರಿಂದಲ್ಲ. ಟಿಪ್ಪು ಬಗ್ಗೆ ಮೈಸೂರು ಭಾಗದಲ್ಲಿ ಲಾವಣಿಗಳಿವೆ. ಅವುಗಳಲ್ಲಿ ಟಿಪ್ಪುವಿನ ದೇಶಪ್ರೇಮ, ಜಾತ್ಯತೀತ ಧೋರಣೆ, ಅಭಿವೃದ್ದಿಯ ಕಲ್ಪನೆಗಳ ಮಾಹಿತಿ ಇದೆ. ಈ ಲಾವಣಿ, ಪದ, ಹಾಡುಗಳೇ ನಿಜವಾದ ಇತಿಹಾಸ ಎಂದು ತಿಳಿಸಿದ್ದಾರೆ. ಸರ್ಕಾರವೇ ಜಯಂತಿಗಳನ್ನು ಆಚರಿಸುವುದಕ್ಕೆ ಕಾರಣವಿದೆ. ಇದನ್ನು ಸಾರ್ವಜನಿಕರಿಗೆ ಬಿಟ್ಟರೆ ತಮ್ಮ ಜಾತಿ-ಧರ್ಮಗಳಿಗೆ ಸೇರಿರುವ ಮಹಾಪುರುಷ-ಮಹಿಳೆಯರ ಜಯಂತಿ ಆಚರಣೆಯನ್ನಷ್ಟೇ ಮಾಡಿ ಅವರನ್ನು ತಮ್ಮ ಜಾತಿ-ಧರ್ಮಗಳಿಗೆ ಸೀಮಿತಗೊಳಿಸುತ್ತಾರೆ. ಇದು ಮಹಾನ್ ವ್ಯಕ್ತಿಗಳಿಗೆ ಅಗೌರವವೂ ಹೌದು. ಮಹಾಪುರುಷ-ಮಹಿಳೆಯರ ಜಯಂತಿ ಆಚರಣೆಯ ಸಂಪ್ರದಾಯವನ್ನು ಹಿಂದಿನ ನಮ್ಮ ಸರ್ಕಾರ ಹುಟ್ಟುಹಾಕಿದ್ದಲ್ಲ, ಅಧಿಕಾರಕ್ಕೆ ಬಂದ ಎಲ್ಲ ಸರ್ಕಾರಗಳು ಜಯಂತಿ ಆಚರಣೆ ಪಟ್ಟಿಗೆ ಇನ್ನಷ್ಟು ಹೆಸರುಗಳನ್ನು ಸೇರಿಸುತ್ತಾ ಬಂದಿವೆ. ಆಗ ಕಾಣಿಸಿಕೊಳ್ಳದ ಪ್ರತಿರೋಧ ಟಿಪ್ಪು ಆಚರಣೆ ಬಗ್ಗೆ ಮಾತ್ರ ಯಾಕೆ ಎಂದು ಕಿಡಿಕಾರಿದ್ದಾರೆ.