ಲೋಕಸಭಾ ಚುನಾವಣೆಗೆ ಇನ್ನು ಕೆಲವೇ ತಿಂಗಳುಗಳು ಬಾಕಿಯಿದ್ದು, ಪ್ರಸ್ತುತ ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಗಳು ಲೋಕಸಭಾ ಚುನಾವಣೆಗೆ ದಿಕ್ಸೂಚಿ ಎಂದೇ ಹೇಳಲಾಗುತ್ತಿದೆ. ಹೀಗಾಗಿ ಎಲ್ಲಾ ಪಕ್ಷಗಳಿಗೂ ಅದರಲ್ಲೂ ಕಾಂಗ್ರೆಸ್ ಪಕ್ಷಕ್ಕಿದು ಅಳಿವು-ಉಳಿವಿನ ಪ್ರಶ್ನೆಯಾಗಿದೆ. ಹೀಗಾಗಿ ಉಳಿದ ಎಲ್ಲಾ ಕೆಲಸಗಳನ್ನು ಬದಿಗೆ ಸರಿಸಿ, ಚುನಾವಣೆ ನಡೆಯುವ ರಾಜ್ಯಗಳಲ್ಲಿ ಭರ್ಜರಿ ಪ್ರಚಾರ ಕಾರ್ಯಗಳಲ್ಲಿ ತೊಡಗಿಕೊಂಡಿದೆ.