ಕರಾವಳಿ ಬಿಜೆಪಿಯ ಕೋಮುವಾದದ ಪ್ರಯೋಗ ಶಾಲೆ: ಸಿದ್ದರಾಮಯ್ಯ ಟ್ವೀಟ್ ಗೆ ಡಿವಿಎಸ್ ಟಾಂಗ್!

ಕರ್ನಾಟಕದ ಕರಾವಳಿಯನ್ನು ಬಿಜೆಪಿ ಕೋಮುವಾದದ ಪ್ರಯೋಗ ಶಾಲೆಯನ್ನಾಗಿ ಮಾಡಿಕೊಂಡಿದೆ, ಹಾಗಾಗಿ ಬಿಜೆಪಿ ರಾಷ್ಟ್ರೀಯ ನಾಯಕರು ಆಗಾಗ ...
ಸಿದ್ದರಾಮಯ್ಯ ಮತ್ತು ಸದಾನಂದಗೌಡ
ಸಿದ್ದರಾಮಯ್ಯ ಮತ್ತು ಸದಾನಂದಗೌಡ
ಬೆಂಗಳೂರು: ಕರ್ನಾಟಕದ ಕರಾವಳಿಯನ್ನು ಬಿಜೆಪಿ ಕೋಮುವಾದದ ಪ್ರಯೋಗ ಶಾಲೆಯನ್ನಾಗಿ ಮಾಡಿಕೊಂಡಿದೆ, ಹಾಗಾಗಿ ಬಿಜೆಪಿ ರಾಷ್ಟ್ರೀಯ ನಾಯಕರು ಆಗಾಗ ಕರಾವಳಿಗೆ ಭೇಟಿ ನೀಡುತ್ತಾರೆ. ಅಮಿತ್ ಶಾ ಮತ್ತು ನರೇಂದ್ರ ಮೋದಿ ಕರ್ನಾಟಕದಲ್ಲಿಯೇ ಬಂದು ಮನೆ ಮಾಡಿದ್ರೂ ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ರಾಜ್ಯದ ಜನ ಬೆಂಬಲ ನೀಡುವುದಿಲ್ಲ  ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ಕರಾವಳಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಇತ್ತೀಚೆಗೆ ಭೇಟಿ ನೀಡಿದ್ದು, ಈ ಬಗ್ಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಾಗ್ದಾಳಿ ನಡೆಸಿದ್ದಾರೆ. ಮಾಜಿ ಮುಖ್ಯಮಂತ್ರಿಯವರು ಮಾಡಿದ ಟ್ವೀಟ್ ಗೆ ಕೇಂದ್ರ ಸಚಿವ ಸದಾನಂದ ಗೌಡ ಅವರು ರೀಟ್ವೀಟ್ ಮಾಡುವ ಮೂಲಕ ಟಾಂಗ್ ನೀಡಿದ್ದಾರೆ.
ಸಿದ್ದರಾಮಯ್ಯ ಅವರೇ ಅದೇ ರಿಕಾರ್ಡ್ ಕಂಠಪಾಠ ಮಾಡಿಕೊಂಡು ಎಷ್ಟು ದಿನ ಸುತ್ತಬೇಕು ಅಂತ ಇದ್ದೀರಾ. ಚಾಮುಂಡೇಶ್ವರಿಯ ಮತದಾರರೇ ನಿಮ್ಮನ್ನು ನಂಬಲಿಲ್ಲ. ಇನ್ನು ಕರಾವಳಿಯ ಜನ ನಿಮ್ಮ ಕಂಠಪಾಠ ಒಪ್ತಾರಾ? ಕರಾವಳಿಯ ಯಾಕೆ ಇಡೀ ಕರ್ನಾಟಕದ ಜನರಿಗೆ ತಮ್ಮ ಆಯ್ಕೆ ಗೊತ್ತಿದೆ. ಇನ್ನು ಅಧಿಕಾರ ಹೊಂದಾಣಿಕೆ ನಿಮ್ಮ ಬಹುಮತಕ್ಕೆ ಬಂದದ್ದಲ್ಲ ನೆನಪಿರಲಿ ಅಂತ ಎಚ್ಚರಿಕೆ ನಿಡಿದ್ದಾರೆ. ನೀವು ಚಾಮುಂಡೇಶ್ವರಿ ಬಿಟ್ಟು ಬಾದಾಮಿಯಲ್ಲಿ ಮನೆ ಮಾಡಿಲ್ವಾ? ಯಾರಾದ್ರೂ ಪ್ರಶ್ನೆ ಮಾಡಿದ್ರಾ? ಕರ್ನಾಟಕದ ಗುತ್ತಿಗೆ ಇನ್ನು ಮತದಾರರಲ್ಲೇ ಇದೆ. ಅದು ನಿಮ್ಮ ಮೈತ್ರಿ ಸರ್ಕಾರಕ್ಕೆ ಯಾರೂ ಬರೆದು ಕೊಟ್ಟಿಲ್ಲ. ಚುನಾವಣೆಯನ್ನು ಎದಿರಿಸೋಣ. ಜನತಾ ನ್ಯಾಯಾಲಯವೇ ದೊಡ್ಡ ಪ್ರಯೋಗ ಶಾಲೆ ಅಂತ ಹೇಳಿದ್ದಾರೆ.
ಡಿವಿಎಸ್ ಎಚ್ಚರಿಕೆ ನಿಡಿದ ಬೆನ್ನಲ್ಲೇ ಸಿದ್ದರಾಮಯ್ಯ ಅವರು ಕೇಂದ್ರ ಸಚಿವರನ್ನು ಪ್ರಶ್ನೆ ಮಾಡುವ ಮೂಲಕ ಕೌಂಟರ್ ಕೊಟ್ಟಿದ್ದಾರೆ. ಶ್ರೀ ಸದಾನಂದಗೌಡರೇ.. ಕರಾವಳಿಯ ಯಾಕೆ ಇಡೀ ಕರ್ನಾಟಕದ ಜನರಿಗೆ ತಮ್ಮ ಆಯ್ಕೆ ಗೊತ್ತಿದೆ..” ಎಂದು ಕರೆಕ್ಟಾಗಿ ಹೇಳಿದ್ದೀರಿ. ನೀವು ಉಡುಪಿ -ಪುತ್ತೂರು ಬಿಟ್ಟು ಬೆಂಗಳೂರಿಗೆ ಬಂದು ಸೇರಿಕೊಂಡಿದ್ದು ಕರಾವಳಿಯವರಿಗೆ ಖಂಡಿತ ಗೊತ್ತಿದೆ. ಜೆಡಿ(ಎಸ್) ಜತೆ ಸೇರ್ಕೊಂಡು ಸರ್ಕಾರ ರಚನೆ ಮಾಡಿದಾಗ ನಿಮ್ಮ ಪಕ್ಷಕ್ಕೆ ಬಹುಮತ ಇತ್ತಾ ಗೌಡ್ರೆ ಅಂತ ಪ್ರಶ್ನಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com