ಶೀಘ್ರ ಸಚಿವ ಸಂಪುಟ ವಿಸ್ತರಣೆ- ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

ಹಲವು ದಿನಗಳಿಂದ ನೆನೆಗುದ್ದಿಗೆ ಬಿದ್ದಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಶೀಘ್ರವೇ ನಡೆಯಲಿದೆ ಎಂದು ಸಮನ್ವಯ ಸಮಿತಿ ಅಧ್ಯಕ್ಷ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

ಹುಬ್ಬಳ್ಳಿ:  ಹಲವು ದಿನಗಳಿಂದ ನೆನೆಗುದ್ದಿಗೆ   ಬಿದ್ದಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಶೀಘ್ರವೇ ನಡೆಯಲಿದೆ ಎಂದು ಸಮನ್ವಯ ಸಮಿತಿ ಅಧ್ಯಕ್ಷ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಸಚಿವ ಸಂಪುಟ ವಿಸ್ತರಣೆ ಕುರಿತಂತೆ ಈಗಾಗಲೇ  ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ. ಸಿ. ವೇಣುಗೋಪಾಲ್  ಅವರೊಂದಿಗೆ ಚರ್ಚಿಸಲಾಗಿದೆ. ಐದು ರಾಜ್ಯಗಳ ಚುನಾವಣಾ ಪ್ರಚಾರದಲ್ಲಿ  ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ತೊಡಗಿಸಿಕೊಂಡಿರುವುದರಿಂದ  ಸಚಿವ ಸಂಪುಟ ವಿಸ್ತರಣೆ ಕುರಿತು ಚರ್ಚಿಸಲು ಸಮಯ ಸಿಗುತ್ತಿಲ್ಲ. ಅವರ ಭೇಟಿಗೆ ಸಮಯ ದೊರೆತ ಕೂಡಲೇ ಅವರೊಂದಿಗೆ ಚರ್ಚಿಸಿ ಸಂಪುಟ ವಿಸ್ತರಣೆಗೆ ಮುಹೂರ್ತ ನಿಗದಿಪಡಿಸಲಾಗುವುದೆಂದು ಸುದ್ದಿಗಾರರಿಗೆ ತಿಳಿಸಿದರು.

ಕಾಂಗ್ರೆಸ್ - ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ಕಾಂಗ್ರೆಸ್ ಪಾಲಿನ 6 ಸಚಿವ ಸ್ಥಾನಗಳನ್ನು ಭರ್ತಿ ಮಾಡಲು ಅವಕಾಶವಿದ್ದು, ಕಾಂಗ್ರೆಸ್ ಪಕ್ಷದಲ್ಲಿ  ಸಚಿವ ಸ್ಥಾನದ ಆಕಾಂಕ್ಷಿಗಳ ಸಂಖ್ಯೆ ದಿನೇ ದಿನೇ ದೊಡ್ಡದಾಗುತ್ತಿದೆ. ಸಚಿವ ಸ್ಥಾನದ ಆಕಾಂಕ್ಷಿಗಳು ಕೂಡಾ ಬೆದರಿಕೆ ತಂತ್ರಗಳನ್ನೊಡುತ್ತಿದ್ದಾರೆ. ಈ ಎಲ್ಲ ಅಂಶಗಳ ಹಿನ್ನೆಲೆಯಲ್ಲಿ ಈ ಮಾಸಾಂತ್ಯಕ್ಕೆ ಸಂಪುಟ ವಿಸ್ತರಣೆ ಮಾಡಲಾಗುವುದೆಂಬ ಸೂಚನೆಗಳಿವೆ ಎಂದರು.

ಮುಂದಿನ ವಾರ ಸಮನ್ವಯ ಸಮಿತಿ ಸಭೆ ಸೇರಲಿದ್ದು, ಸಂಪುಟ ವಿಸ್ತರಣೆ ಕುರಿತಂತೆ ಮೈತ್ರಿ ಸರ್ಕಾರದ ಪಾಲುದಾರ ಪಕ್ಷಗಳ ನಾಯಕರು ಸಂಪುಟ ವಿಸ್ತರಣೆ ಕುರಿತು ಅಂತಿಮ ತೀರ್ಮಾನಕ್ಕೆ ಬರುವ ಸಾಧ್ಯತೆ ಇದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com