ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ್
ರಾಜಕೀಯ
ಹೈಕಮಾಂಡ್ ಹೇಳಿದರೆ ಸಿಎಂ ಆಗಲು ಸಿದ್ಧ: ಉಪ ಮುಖ್ಯಮಂತ್ರಿ ಪರಮೇಶ್ವರ್
ಹಿಂದೆ ಹಲವು ಸಂದರ್ಭಗಳಲ್ಲಿ ಮುಖ್ಯಮಂತ್ರಿಯಾಗುವ ಇಂಗಿತ ಹೊರಹಾಕಿದ್ದ ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ್ ಅವರು ಇದೀಗ ಮತ್ತೊಮ್ಮೆ ತಮ್ಮ ಮನದಾಳ ಬಿಚ್ಚಿಟ್ಟಿದ್ದಾರೆ...
ಬೆಳಗಾವಿ: ಹಿಂದೆ ಹಲವು ಸಂದರ್ಭಗಳಲ್ಲಿ ಮುಖ್ಯಮಂತ್ರಿಯಾಗುವ ಇಂಗಿತ ಹೊರಹಾಕಿದ್ದ ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ್ ಅವರು ಇದೀಗ ಮತ್ತೊಮ್ಮೆ ತಮ್ಮ ಮನದಾಳ ಬಿಚ್ಚಿಟ್ಟಿದ್ದಾರೆ.
ಅವಕಾಶ ಸಿಕ್ಕರೆ ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿಯಾಗುವುದಾಗಿ ಪರಮೇಶ್ವರ್ ಅವರು ಹೇಳಿದ್ದಾರೆ.
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನಲ್ಲಿ ಮುಖ್ಯಮಂತ್ರಿ ಆಕಾಂಕ್ಷಿಗಳು ಯಾರೂ ಇಲ್ಲ. ಒಂದು ವೇಳೆ ಹೈಕಮಾಂಡ್ ನನಗೆ ಮುಖ್ಯಮಂತ್ರಿಯಾಗುವಂತೆ ತಿಳಿಸಿದರೆ ನಾನು ಸಿದ್ಧನಿದ್ದೇನೆಂದು ಹೇಳಿದ್ದಾರೆ. '
ಈಗಾಗಲೇ ಹೈಕಮಾಂಡ್ ನನ್ನನ್ನು ಉಪ ಮುಖ್ಯಮಂತ್ರಿಯಾಗಿ ಮಾಡಿದೆ. ಈ ಹುದ್ದೆಯನ್ನು ಪ್ರಮಾಣಿಕತೆ ಹಾಗೂ ದಕ್ಷೆಯಿಂದ ನಿಭಾಯಿಸುತ್ತಿದ್ದೇನೆ. ಮುಂದೆ ಮುಖ್ಯಮಂತ್ರಿಯಾಗಲು ತಿಳಿಸಿದರೆ, ಅದನ್ನೂ ನಿಭಾಯಿಸುತ್ತೇನೆಂದು ಆತ್ಮವಿಶ್ವಾಸ ವ್ಯಕ್ತಪಡಿಸಿದರು.

