ರೆಡ್ಡಿ- ಬಿಎಸ್ ವೈ ಭೇಟಿ ಬೂಟಾಟಿಕೆ: ಯಡಿಯೂರಪ್ಪ ಸಿಎಂ ಆಗುವ ಹಗಲುಗನಸು ಕಾಣುತ್ತಿದ್ದಾರೆ: ಜಮೀರ್

ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿ ಮತ್ತು ಮಾಜಿ ಸಿಎಂ ಬಿ,ಎಸ್ ಯಡಿಯೂರಪ್ಪ ಅವರ ಭೇಟಿಯಿಂದ ಯಾವುದೇ ಅಚ್ಚರಿಯಾಗಿಲ್ಲ ಎಂದು ಆಹಾರ ಮತ್ತು ...
ಜಮೀರ್ ಅಹ್ಮದ್ ಖಾನ್
ಜಮೀರ್ ಅಹ್ಮದ್ ಖಾನ್
ಉಡುಪಿ: ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿ ಮತ್ತು ಮಾಜಿ ಸಿಎಂ ಬಿ,ಎಸ್ ಯಡಿಯೂರಪ್ಪ ಅವರ ಭೇಟಿಯಿಂದ ಯಾವುದೇ ಅಚ್ಚರಿಯಾಗಿಲ್ಲ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಜಮೀರ್ ಅಹ್ಮದ್ ಹೇಳಿದ್ದಾರೆ.
ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನಾರ್ಧನ ರೆಡ್ಡಿ ಜೊತೆ ಬಿಜೆಪಿ ಸಂಬಂಧದ ಬಗ್ಗೆ ಲೇವಡಿಯಾಡಿದರು, ಕೆಟ್ಟ ಘಳಿಗೆ ಬಂದಾಗ ಯು ಟರ್ನ್ ಹೊಡೆಯುವುದು ಬಿಜೆಪಿಯವರಿಗೆ ಮಾಮೂಲಿ, ಬಿಜೆಪಿಯವರು ಚೆನ್ನಾಗಿದ್ದರೆ ಮಾತ್ರ ಜೊತೆಗಿರುತ್ತಾರೆ. ಹೆಚ್ಚು ಕಡಿಮೆ ಆದರೆ ಮಾತ್ರ ಬಿಟ್ಟು ಬಿಡುತ್ತಾರೆ ಎಂದು ಟೀಕಿಸಿದ್ದಾರೆ.
ಜನಾರ್ದನ ರೆಡ್ಡಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.​ಯಡಿಯೂರಪ್ಪ ಭೇಟಿ ವಿಚಾರಕ್ಕೆ ಪ್ರತಿಕ್ರಿಯಿಸಿ, ಜನಾರ್ಧನ ರೆಡ್ಡಿ ಬಿಜೆಪಿಯಲ್ಲೇ ಇದ್ದಾರೆ. ಜನಾರ್ದನ ರೆಡ್ಡಿ ಅವರು ಪಕ್ಷದ ಅಧ್ಯಕ್ಷರನ್ನು ಭೇಟಿ ಮಾಡಿದ್ದಾರೆ.
ಬಿ ಎಸ್ ಯಡಿಯೂರಪ್ಪ ಕಳೆದ ಮೂರ್ನಾಲ್ಕು ತಿಂಗಳಿಂದ ಬಿಎಸ್​ವೈ ನಿದ್ದೆ ಮಾಡಿಲ್ಲ, ಮುಖ್ಯಮಂತ್ರಿ ಆದೆ ಎಂದು ಬಿಎಸ್​ವೈ ಕನಸು ಕಾಣುತ್ತಾರಂತೆ. ಕನಸು ಕಾಣುವುದು ತಪ್ಪಲ್ಲ. ಆದರೆ, ಎಲ್ಲರೂ ರಾತ್ರಿ ಕನಸು ಕಂಡರೆ ಬಿಎಸ್‌ವೈ ಅವರು ಹಗಲುಗನಸು ಕಾಣುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.
ರಾಮಮಂದಿರ ಕಟ್ಟಲು ಮುಸಲ್ಮಾನರ ವಿರೋಧ ಇಲ್ಲ. ಲೋಕಸಭಾ ಚುನಾವಣೆ ಬಂದರೆ ಬಿಜೆಪಿಯವರಿಗೆ ರಾಮಮಂದಿರ ನೆನಪಾಗುತ್ತದೆ. ನಾಲ್ಕೂವರೆ ವರ್ಷದಲ್ಲಿ ರಾಮಮಂದಿರ ಜ್ಞಾಪಕಕ್ಕೆ ಬಂದಿಲ್ಲ ಎಂದು ಹೇಳಿದರು.
ಇನ್ನೂ ರಾಜ್ಯದಲ್ಲಿರುವ ಅಸ್ತಿತ್ವದಲ್ಲಿರುವ ಮೈತ್ರಿ ಸರ್ಕಾರವನ್ನು ಅಸ್ಥಿರಗೊಳಿಸಲು ಯಾರಿಂದಲೂ ಸಾಧ್ಯವಿಲ್ಲ, ಮೈತ್ರಿ ಸರ್ಕಾರ ಐದು ವರ್ಷ ಪೂರ್ಣಗೊಳಿಸುತ್ತದೆ ಎಂದು ಭರವಸೆ ವ್ಯಕ್ತ ಪಡಿಸಿದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com