ಅಸೆಂಬ್ಲಿ ಚುನಾವಣಾ ಫಲಿತಾಂಶವನ್ನು ಬಿಜೆಪಿ ಪುನರಾವರ್ತಿಸಲು ಸಾಧ್ಯವಿಲ್ಲ- ವೀರಪ್ಪಮೊಯ್ಲಿ

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಎರಡು ಮೂರು ಸ್ಥಾನಗಳನ್ನು ಪಡೆಯುವುದು ಸಹ ಕಷ್ಟಕರವಾಗಿದ್ದು, ಏಕಾಂಗಿಯಾಗಿ ಅಸೆಂಬ್ಲಿ ಚುನಾವಣೆ ಫಲಿತಾಂಶವನ್ನು ಪುನರಾವರ್ತಿಸಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಎಂ. ವೀರಪ್ಪ ಮೊಯ್ಲಿ ಹೇಳಿದ್ದಾರೆ.
ವೀರಪ್ಪ ಮೊಯ್ಲಿ
ವೀರಪ್ಪ ಮೊಯ್ಲಿ

ರಾಜ್ ಪುರ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಎರಡು ಮೂರು ಸ್ಥಾನಗಳನ್ನು ಪಡೆಯುವುದು ಸಹ ಕಷ್ಟಕರವಾಗಿದ್ದು, ಏಕಾಂಗಿಯಾಗಿ ಅಸೆಂಬ್ಲಿ ಚುನಾವಣೆ  ಫಲಿತಾಂಶವನ್ನು  ಪುನರಾವರ್ತಿಸಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್  ಹಿರಿಯ ಮುಖಂಡ ಎಂ. ವೀರಪ್ಪ ಮೊಯ್ಲಿ ಹೇಳಿದ್ದಾರೆ.

ಇತ್ತೀಚಿಗೆ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಕರ್ನಾಟಕದಲ್ಲಿ ತನ್ನ ಬಲವನ್ನು ಕಳೆದುಕೊಂಡಿದೆ ಎಂಬುದು ಸಾಬೀತಾಗಿದೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಎರಡರಿಂದ ಮೂರು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಬಹುದೆಂದು ಅವರು   ಸುದ್ದಿಸಂಸ್ಥೆಯೊಂದಕ್ಕೆ  ಹೇಳಿಕೆ ನೀಡಿದ್ದಾರೆ.

ಕೇರಳದಲ್ಲಿ ಬಿಜೆಪಿ  ಅತ್ಯುತ್ತಮ ಪ್ರಯತ್ನ ಹಾಕಿದ್ದರೂ ಕಾಂಗ್ರೆಸ್ ಮತ್ತು ಎಡಪಕ್ಷಗಳ ಸದೃಢ ಮೈತ್ರಿಯಿಂದಾಗಿ ಖಾತೆ ತೆರೆಯಲು ಸಾಧ್ಯವಾಗುವುದಿಲ್ಲ. ಡಿಎಂಕೆ ಹಾಗೂ ಕಾಂಗ್ರೆಸ್ ಮೈತ್ರಿಯಿಂದಾಗಿ ತಮಿಳುನಾಡಿನಲ್ಲೂ ಬಿಜೆಪಿ ಪ್ರವೇಶಕ್ಕೆ ಅವಕಾಶವಾಗುವುದಿಲ್ಲ   ಎಂಬ ವಿಶ್ವಾಸ ಇರುವುದಾಗಿ ಹೇಳಿದರು.

ತೆಲಂಗಾಣದಲ್ಲಿ ಕಾಂಗ್ರೆಸ್, ತೆಲಂಗಾಣ, ಹಾಗೂ ಎಡಪಕ್ಷಗಳು ಸೇರಿ ಮೈತ್ರಿ ಸರ್ಕಾರ ರಚಿಸಲಿದ್ದು, ಅಲ್ಲೂ ಕೂಡಾ ಬಿಜೆಪಿಗೆ ಅಸ್ತಿತ್ವ ಇಲ್ಲದಂತಾಗಿದೆ. ಆಂಧ್ರದಲ್ಲಿ ಕಾಂಗ್ರೆಸ್ ಮತ್ತು ಟಿಡಿಪಿ ನಡುವಿನ ಮೈತ್ರಿ ಇನ್ನೂಅಸ್ಪಷ್ಟವಾಗಿದ್ದು, ಈ ಹಂತದಲ್ಲಿ ಏನನ್ನೂ ಹೇಳಲು ಸಾಧ್ಯವಿಲ್ಲ ಎಂದರು.

ಉತ್ತರ ಭಾರತದಲ್ಲೂ ಬಿಜೆಪಿ ತೊಂದರೆಯಲ್ಲಿದೆ ಎಂದು ಹೇಳಿದ ವೀರಪ್ಪಮೊಯ್ಲಿ ಗೋವಾದಲ್ಲಿ ಏಕಾಂಗಿಯಾಗಿ ಚುನಾವಣೆ ಎದುರಿಸದಂತಾಗಿದೆ. ಪ್ರಧಾನಿ ಮೋದಿ ಸಿಬಿಐ, ಇಡಿ ಮತ್ತು ಆದಾಯ ತೆರಿಗೆ ಇಲಾಖೆಗಳನ್ನು ದುರ್ಬಳಕೆ ಮಾಡಿಕೊಂಡು  ಪ್ರತಿಪಕ್ಷಗಳ ವಿರುದ್ಧ ದಾಳಿ ನಡೆಸಿದ್ದರೂ  ಮಹಾಘಟ್ಟ ಬಂಧನ ತಡೆಯುವುದರಲ್ಲಿ ಯಶಸ್ವಿಯಾಗುವುದಿಲ್ಲ ಎಂದರು.

ದೇಶಾದ್ಯಂತ ಕಾಂಗ್ರೆಸ್ ಪರ ಅಲೆ ಎದಿದ್ದು, ಬಿಜೆಪಿ ತನ್ನ ಮೈತ್ರಿ ಪಕ್ಷಗಳನ್ನೇ ಕಳೆದುಕೊಳ್ಳುವಂತಾಗಿದೆ. ಅಲ್ಲಿ ಕಾಂಗ್ರೆಸ್   ಪಕ್ಷಕ್ಕೆ ವರವಾಗಲಿದ್ದು, ಉತ್ತರ ಪ್ರದೇಶದಲ್ಲಿ ಪ್ರತಿಪಕ್ಷಗಳ ಮಹಾಮೈತ್ರಿಯಿಂದಾಗಿ ಬಿಜೆಪಿ ಐದು ಸ್ಥಾನಗಳಲ್ಲಿಯೂ ಗೆಲುವು ಸಾಧಿಸುವುದು ಕಷ್ಟಕರವಾಗಿದೆ ಎಂದು ವೀರಪ್ಪ ಮೊಯ್ಲಿ ಹೇಳಿದರು.

ರಾಹುಲ್ ಗಾಂಧಿ ಡೈನಾಮಿಕ್ ನಾಯಕರಾಗಿದ್ದು, ಪಕ್ಷವನ್ನು ಪ್ರಗತಿಪಥದಲ್ಲಿ ಮುನ್ನಡೆಸಿಕೊಂಡು ಹೋಗುತ್ತಿದ್ದಾರೆ. 2019ರ ಲೋಕಸಭಾ ಚುನಾವಣೆ ನಂತರ ಪ್ರಧಾನಿ ಯಾರು ಆಗಬೇಕೆಂಬ ಬಗ್ಗೆ ನಿರ್ಧರಿಸಲಾಗುವುದು ಎಂದು ವೀರಪ್ಪ ಮೊಯ್ಲಿ ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com