ದಕ್ಷಿಣ ರಾಜ್ಯಗಳಲ್ಲಿ ಶಬರಿಮಲೆ ವಿವಾದವನ್ನು ಮುಖ್ಯ ವೇದಿಕೆಗೆ ತರಲು ಬಿಜೆಪಿ ಯತ್ನ

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ರಾಷ್ಟ್ರವ್ಯಾಪಿ ಅಭಿಯಾನ ಆರಂಭಿಸಲು ಸಿದ್ದತೆಗಳು....
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್

ಬೆಂಗಳೂರು: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ರಾಷ್ಟ್ರವ್ಯಾಪಿ ಅಭಿಯಾನ ಆರಂಭಿಸಲು ಸಿದ್ದತೆಗಳು ನಡೆಯುತ್ತಿರುವುದರ ಮಧ್ಯೆ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೇರಳದ ಶಬರಿಮಲೆ ದೇಗುಲಕ್ಕೆ ಮಹಿಳೆಯರ ಪ್ರವೇಶ ಕುರಿತ ಪ್ರತಿಭಟನೆಯನ್ನು ದಕ್ಷಿಣ ಭಾರತದ ಇತರ ರಾಜ್ಯಗಳಿಗೆ ವಿಸ್ತರಿಸಲು ಮುಂದಾಗಿದ್ದಾರೆ.

ಈ ಹಿನ್ನಲೆಯಲ್ಲಿ ಮೊದಲ ಹಂತವಾಗಿ ಡಿಸೆಂಬರ್ 16ರಂದು ಕಾಸರಗೋಡು ಜಿಲ್ಲೆಯಲ್ಲಿ ಹಿಂದೂ ಸಮಾಜೋತ್ಸವ ರ್ಯಾಲಿ ಆಯೋಜಿಸಲಾಗಿದೆ. ಅಲ್ಲಿ ಯೋಗಿ ಆದಿತ್ಯನಾಥ ಅವರು ಉತ್ಸವವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಶಬರಿಮಲೆ ವಿವಾದ, ಪ್ರತಿಭಟನೆಯನ್ನು ದಕ್ಷಿಣದ ಬೇರೆ ರಾಜ್ಯಗಳಿಗೆ ವಿಸ್ತರಿಸಲು ಇದು ವೇದಿಕೆಯಾಗುವುದು ಮಾತ್ರವಲ್ಲದೆ ಮುಂದಿನ ಲೋಕಸಭೆ ಚುನಾವಣೆಗೆ ಕೇರಳ ಮತ್ತು ಕರಾವಳಿ ಕರ್ನಾಟಕ ಭಾಗಗಳಲ್ಲಿ ಶಬರಿಮಲೆ ವಿವಾದವನ್ನು ಕೂಡ ಬಿಜೆಪಿ ಕೈಗೆತ್ತಿಕೊಳ್ಳುವ ಸಾಧ್ಯತೆಯಿದೆ.

ಈ ಹಿಂದೂ ಸಮಾಜೋತ್ಸವದಲ್ಲಿ ಕೇರಳದ ಹಿಂದೂಗಳು ಮಾತ್ರವಲ್ಲದೆ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಮಡಿಕೇರಿಯ ಹಿಂದೂ ಧರ್ಮೀಯರು ಕೂಡ ರ್ಯಾಲಿಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ಶಬರಿಮಲೆ, ಲವ್ ಜಿಹಾದ್ ಮತ್ತು ಇತರ ವಿಷಯಗಳಲ್ಲಿ ಕೇರಳ ಸರ್ಕಾರ ಹಿಂದೂ ವಿರೋಧಿ ನಿಲುವು ತಳೆಯುತ್ತಿದೆ ಎಂದು ಹೇಳಿ ಸಾರ್ವಜನಿಕರ ಅಭಿಪ್ರಾಯ ಸಂಗ್ರಹಿಸುವ ರ್ಯಾಲಿ ಇದಾಗಲಿದೆ ಎಂದು ಮಂಗಳೂರು ವಿಭಾಗದ ವಿಶ್ವ ಹಿಂದೂ ಪರಿಷತ್ ಕಾರ್ಯದರ್ಶಿ ಶರಣ್ ಪಂಪ್ ವೆಲ್ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆಗೆ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com