`ಟ್ರಬಲ್ ಶೂಟರ್' ಡಿಕೆಶಿಗೆ ಹೊಸ ಜವಾಬ್ದಾರಿ ನೀಡಿದ ಹೈಕಮಾಂಡ್

ಇತ್ತೀಚಿಗೆ ನಡೆದ ಬಳ್ಳಾರಿ ಲೋಕಸಭೆ ಚುನಾವಣೆಯಲ್ಲಿ ಮಹತ್ವದ ಪಾತ್ರವಹಿಸಿದ್ದ ಹಾಗೂ ನಿನ್ನೆ ಬೆಳಗಾವಿಯಲ್ಲಿ ...
ರಾಹುಲ್ ಗಾಂಧಿ - ಡಿಕೆ ಶಿವಕುಮಾರ್
ರಾಹುಲ್ ಗಾಂಧಿ - ಡಿಕೆ ಶಿವಕುಮಾರ್
ಬೆಂಗಳೂರು: ಇತ್ತೀಚಿಗೆ ನಡೆದ ಬಳ್ಳಾರಿ ಲೋಕಸಭೆ ಉಪ ಚುನಾವಣೆಯಲ್ಲಿ ಮಹತ್ವದ ಪಾತ್ರವಹಿಸಿದ್ದ ಹಾಗೂ ನಿನ್ನೆ ಬೆಳಗಾವಿಯಲ್ಲಿ ಪ್ರತಿಭಟನಾನಿರತ ಕಬ್ಬು ಬೆಳೆಗಾರರ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದ ಜಲ ಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಈಗ ಹೊಸ ಜವಾಬ್ದಾರಿಯೊಂದನ್ನು ನೀಡಿದೆ.
ಸಮ್ಮಿಶ್ರ ಸರ್ಕಾರದ ಪ್ರಭಾವಿ ಸಚಿವ ಡಿಕೆಶಿ ನಿಜಕ್ಕೂ ಕಾಂಗ್ರೆಸ್ ಪಾಲಿನ ಟ್ರಬಲ್ ಶೂಟರ್ ಆಗಿದ್ದು, ಕಾಂಗ್ರೆಸ್ - ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಅಪಸ್ವರಕ್ಕೆ ಅವಕಾಶ ನೀಡದಂತೆ ಉಭಯ ಪಕ್ಷಗಳ ಸಚಿವರು ಹಾಗೂ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ದೋಸ್ತಿ ಸರ್ಕಾರಕ್ಕೆ ಧಕ್ಕೆಯಾಗದಂತೆ ನೋಡಿಕೊಳ್ಳುವ ಜವಾಬ್ದಾರಿಯನ್ನು ಸಚಿವ ಡಿ.ಕೆ.ಶಿವಕುಮಾರ್ ಗೆ ಕಾಂಗ್ರೆಸ್ ಹೈಕಮಾಂಡ್ ನೀಡಿದೆ. 
ಇತ್ತೀಚಿನ ದಿನಗಳಲ್ಲಿ `ಟ್ರಬಲ್ ಶೂಟರ್’ ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ಶಿವಕುಮಾರ್ ಅವರಿಗೆ ಮಹತ್ವದ ಜವಾಬ್ದಾರಿ ನೀಡುವ ಮೂಲಕ ಮೈತ್ರಿ ಸರ್ಕಾರಕ್ಕೆ ಯಾವುದೇ ರೀತಿಯ ಧಕ್ಕೆಯುಂಟಾಗದಂತೆ ನೋಡಿಕೊಳ್ಳಬೇಕು. ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಸೇರಿದಂತೆ ಉಭಯ ಪಕ್ಷಗಳ ಸಚಿವರು, ಶಾಸಕರಲ್ಲಿ ಅಸಮಾಧಾನವುಂಟಾಗದಂತೆ ಪರಿಸ್ಥಿತಿಯನ್ನು ನಿಭಾಯಿಸಬೇಕು ಎಂದು ಹೈಕಮಾಂಡ್ ಕಿವಿಮಾತು ಹೇಳಿದೆ.
ಡಿಕೆ ಶಿವಕುಮಾರ್ ಅವರು ತೆಂಲಗಾಣ ವಿಧಾನಸಭೆ ಚುನಾವಣಾ ಪ್ರಚಾರಕ್ಕಾಗಿ ಆಗಮಸಿದ್ದ ಕಾಂಗ್ರೆಸ್ ಅಧ್ಯಕ್ಷ ರಾಹುಲ್‌ಗಾಂಧಿ ಹಾಗೂ ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿಯಾದ ಸಂದರ್ಭದಲ್ಲಿ ಡಿಕೆಶಿಗೆ ಈ ಸಲಹೆ ನೀಡಲಾಗಿದೆ ಎನ್ನಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com