ಹೆಚ್ಚಿದ ಒತ್ತಡ: ಸಂಪುಟ ವಿಸ್ತರಣೆ ಎಂಬ ಜೇನುಗೂಡಿಗೆ 'ಕೈ' ಹಾಕಲಿದ್ಯಾ ಕಾಂಗ್ರೆಸ್?

: ಹಲವು ತಿಂಗಳುಗಳಿಂದ ಕಗ್ಗಂಟಾಗಿದ್ದ ಸಂಪುಟ ವಿಸ್ತರಣೆಗೆ ಕೊನೆಗೂ ಕಾಲ ಕೂಡಿ ಬಂದಿದೆ ಎನ್ನಲಾಗಿದೆ, ಡಿಸೆಂಬರ್ 10ರೊಳಗೆ ಸಂಪುಟ ವಿಸ್ತರಣೆ ಮಾಡಲಾಗುತ್ತದೆ ..
ಸಿದ್ದರಾಮಯ್ಯ
ಸಿದ್ದರಾಮಯ್ಯ
ಬೆಂಗಳೂರು: ಹಲವು ತಿಂಗಳುಗಳಿಂದ ಕಗ್ಗಂಟಾಗಿದ್ದ ಸಂಪುಟ ವಿಸ್ತರಣೆಗೆ ಕೊನೆಗೂ ಕಾಲ ಕೂಡಿ ಬಂದಿದೆ ಎನ್ನಲಾಗಿದೆ, ಡಿಸೆಂಬರ್ 10ರೊಳಗೆ ಸಂಪುಟ ವಿಸ್ತರಣೆ ಮಾಡಲಾಗುತ್ತದೆ ಎಂದು ಹೇಳಲಾಗುತ್ತಿದೆ.
ಈ ಮೊದಲು ಸಿದ್ದರಾಮಯ್ಯ ಮತ್ತು ಮಾಜಿ ಪ್ರಧಾನಿ ದೇವೇಗೌಡ ಕೆಲವು ದಿನಗಳ ಹಿಂದೆಯಷ್ಟೇ ಬೆಳಗಾವಿ ಅಧಿವೇಶನ ಆರಂಭವಾಗುವುದಕ್ಕೆ ಮುಂಚೆಯೇ  ಸಂಪುಟ ವಿಸ್ತರಣೆ ಮಾಡಲಾಗುವುದು ಎಂದು ಹೇಳಿದ್ದರು,.  ಸೋಮವಾರದ ನಂತರ ವಿಸ್ತರಣೆ ದಿನಾಂಕ ನಿರ್ಧರಿಸುವುದಾಗಿ ತಿಳಿಸಿದ್ದಾರೆ,
ಕಾಂಗ್ರೆಸ್ ನಲ್ಲಿ ಆರು ಹಾಗೂ ಜೆಡಿಎಸ್ ನಲ್ಲಿ ಎರಡು ಸಚಿವ ಸ್ಥಾನಗಳು ಖಾಲಿಯಿವೆ, ಸದ್ಯ ಕಾಂಗ್ರೆಸ್ 4 ಸ್ಥಾನ ತುಂಬಿ ಇನ್ನು 2 ಸ್ಥಾನಗಳನ್ನು ಖಾಲಿ ಉಳಿಸಿಕೊಳ್ಳುವ ಇರಾದೆ ಹೊಂದಿದೆ. ಮುಂದಿನ ದಿನಗಳ ರಾಜಕೀಯ ಅಗತ್ಯತೆಗಾಗಿ 2 ಸ್ಥಾನ ಉಳಿಸಿಕೊಳ್ಳಲು ನಿರ್ಧರಿಸಿದೆ.ಕೆಲವು ಕಾಂಗ್ರೆಸ್ ಶಾಸಕರು ಸಚಿವ ಸ್ಥಾನಕ್ಕಾಗಿ ಲಾಭಿ ನಡೆಸಲು ಮುಂದಾಗಿದ್ದಾರೆ, ಆದರೆ ಕಾಂಗ್ರೆಸ್ ಮುಖಂಡರು ಐದು ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಬ್ಯುಸಿಯಾಗಿದ್ದಾರೆ.
ಕಾಂಗ್ರೆಸ್ ನಲ್ಲಿ ಕೇವಲ ಹಿರಿಯ ನಾಯಕರು ಮಾತ್ರವಲ್ಲ, ಮೊದಲ ಬಾರಿಗೆ ಶಾಸಕರಾದವರು ಕೂಡ ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದಾರೆ. ಲಕ್ಷ್ಮಿ ಹೆಬ್ಬಾಳ್ಕಕ್, ಅಂಜಲಿ ನಿಂಬಾಳ್ಕರ್ ಮತ್ತು ಗಣೇಶ್ ಹುಕ್ಕೇರಿ ಪ್ರಬಲ ಆಕಾಂಕ್ಷಿಗಳಾಗಿದ್ದಾರೆ. 
ಮಾಜಿ ಸಚಿವರುಗಳಾದ ರಾಮಲಿಂಗಾರೆಡ್ಡಿ, ಮತ್ತು ಎಂಬಿ ಪಾಟೀಲ್ ಗೆ ಸಿದ್ದರಾಮಯ್ಯ ಅವರ ಬೆಂಬಲವಿದೆ,  ಸಿದ್ದರಾಮಯ್ಯ ಅವರಕ ಜೊತೆಗೆ ಜಾರಕಿಹೊಳಿ ಸಹೋದರರು ಕೂಡ ಎಂಬಿ ಪಾಟೀಲ್ ಪರವಾಗಿ ಬ್ಯಾಟಿಂಗ್ ಮಾಡುತ್ತಿದ್ದಾರೆ,
ಉತ್ತರ ಕರ್ನಾಟಕದ ಇಬ್ಬರಿಗೆ ಸಚಿವ ಸ್ಥಾನ ನೀಡುವಂತೆ ಕಾಂಗ್ರೆಸ್ ಮೇಲೆ ಹೆಚ್ಚಿನ ಒತ್ತಡವಿದೆ. ಕುರುಬ ಸಮುದಾಯಕ್ಕೆ ಸೇರಿದ ಶಾಸಕ ಸಿ.ಎಸ್ ಶಿವಳ್ಳಿಗೆ ನೀಡಲು ಸಿದ್ದರಾಮಯ್ಯ ಅವರಿಗೆ ಮನಸ್ಸಿದೆ, ಜೊತೆಗೆ ಹೊಸಕೋಟೆ ಶಾಸಕ ಎಂಟಿಬಿ ನಾಗರಾಜ್ ಕೂಡ ಕುರುಬ ಸಮುದಾಯಕ್ಕೆ ಸೇರಿದವರಾಗಿದ್ದು,  ಅವರು ಕೂಡ ಲಾಬಿ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ, 
ಬೆಳಗಾವಿಯಿಂದ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ಮಾಜಿ ಸಚಿವ ಸತೀಶ್ ಜಾರಕಿಹೊಳಿ ಕೂಡ ಆಕಾಂಕ್ಷಿಗಳಾಗಿದ್ದಾರೆ.  ನಾಲ್ಕು ಹುದ್ದೆಗಳಿಗೆ ತಮ್ಮನ್ನು ಪರಿಗಣಿಸಬೇಕೆಂದು ಒತ್ತಡ ಹಾಕುತ್ತಿದ್ದಾರೆ, ಆದರೆ ಲಕ್ಷ್ಮಿ ಹೆಬ್ಬಾಳ್ಕರ್ ಗೆ ಸಚಿವ ಸ್ಥಾನ ನೀಡಬಾರದೆಂದು ಅವರ ವಿರುದ್ಧ ವಾಗಿ ಈಗಾಗಲೇ ಕಾಂಗ್ರೆಸ್ ಹೈಕಮಾಂಡ್ ಬಳಿ ಕಿವಿಯೂದಲಾಗಿದೆ, ಒಂದು ವೇಳೆ ಹೆಬ್ಬಾಳ್ಕರ್ ಗೆ ಸ್ಥಾನ ನೀಡಿದ್ದೇ ಆದರೇ ತಾವು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡುವುದಾಗಿ ಜಾರಕಿಹೊಳಿ ಸಹೋದರರು ಬೆದರಿಕೆ ಒಡ್ಡಿದ್ದಾರೆ ಎನ್ನಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com