ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಅಕ್ಟೋಬರ್ 12ರೊಳಗೆ ಸಂಪುಟ ವಿಸ್ತರಣೆ ಮಾಡುವುದಾಗಿ ಹೇಳಿದ್ದು, ಕಾಂಗ್ರೆಸ್ ಸಚಿವ ಆಕಾಂಕ್ಷಿಗಳು ದೆಹಲಿಗೆ ತೆರಳಿ ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ್ ಖರ್ಗೆ ಅವರ ಮೂಲಕ ಹೈಕಮಾಂಡ್ ಮೇಲೆ ಒತ್ತಡ ಹೇರುತ್ತಿದ್ದಾರೆ.