ಬಿಎಸ್'ಪಿ ಕೇವಲ ರಾಜಕೀಯ ಪಕ್ಷವಲ್ಲ. ಜನರನ್ನು ಒಗ್ಗೂಡಿಸಲು ಹೋರಾಡುತ್ತಿರುವ ಪಕ್ಷವಾಗಿದೆ. ಹಿಂದೂಳಿದ ಹಾಗೂ ಅಲ್ಪಸಂಖ್ಯಾತ ಜನರನ್ನು ಉತ್ತಮ ವೇದಿಕೆಗೆ ತರುವ ಗುರಿಯನ್ನು ಹೊಂದಿರುವ ಪಕ್ಷವಾಗಿದೆ. ಸಮಾಜದಲ್ಲಿ ಸಮಾನತೆಯನ್ನು ತರುವಲ್ಲಿ ಜೆಡಿಎಸ್, ಕಾಂಗ್ರೆಸ್ ಹಾಗೂ ಬಿಜೆಪಿ ವಿಫಲವಾಗಿದೆ. ಬಡವರು ಹಾಗೂ ಸಾಮಾಜಿಕ-ಆರ್ಥಿಕ ಸಮಾನತೆಯನ್ನು ಸಬಲೀಕರಣಗೊಳಿಸುವಲ್ಲಿ ಪಕ್ಷಗಳು ವಿಫಲಗೊಂಡಿವೆ ಎಂದು ತಿಳಿಸಿದ್ದಾರೆ.