ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ರಾಘವೇಂದ್ರ ಬಿಜೆಪಿ ಅಭ್ಯರ್ಥಿ: ಬಿಎಸ್ ವೈ

ಕೇಂದ್ರ ಚುನಾವಣಾ ಆಯೋಗ ರಾಜ್ಯದ ಮೂರು ಲೋಕಸಭೆ ಹಾಗೂ ಎರಡು ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆ...
ಬಿವೈ ರಾಘವೇಂದ್ರ
ಬಿವೈ ರಾಘವೇಂದ್ರ
Updated on: 
ಶಿವಮೊಗ್ಗ: ಕೇಂದ್ರ ಚುನಾವಣಾ ಆಯೋಗ ರಾಜ್ಯದ ಮೂರು ಲೋಕಸಭೆ ಹಾಗೂ ಎರಡು ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆ ದಿನಾಂಕ ಪ್ರಕಟಿಸಿದ ಕೆಲವೇ ಗಂಟೆಗಳಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರು, ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ತಮ್ಮ ಪುತ್ರ ಹಾಗೂ ಮಾಜಿ ಸಂಸದ ಬಿ.ವೈ.ರಾಘವೇಂದ್ರ ಅವರೇ ಬಿಜೆಪಿ ಅಭ್ಯರ್ಥಿ ಎಂದು ಘೋಷಿಸಿದ್ದಾರೆ.
ಉಪ ಚುನಾವಣೆ ಘೋಷಣೆಯಾದ ನಂತರ ಶಿಕಾರಿಪುರದಲ್ಲಿ ಪಕ್ಷದ ಕಾರ್ಯಕ್ರಮದಲ್ಲಿ ಮಾತನಾಡಿದ ಬಿ.ಎಸ್. ಯಡಿಯೂರಪ್ಪ, ಶಿವಮೊಗ್ಗ ಕ್ಷೇತ್ರಕ್ಕೆ ಬಿ.ವೈ. ರಾಘವೇಂದ್ರ ಅವರೇ ಬಿಜೆಪಿ ಅಭ್ಯರ್ಥಿ. ಕಳೆದ ಚುನಾವಣೆಯಲ್ಲಿ ನನ್ನನ್ನು ಅತ್ಯಧಿಕ ಮತಗಳ ಅಂತರದಲ್ಲಿ ಗೆಲ್ಲಿಸಿದಂತೆ ಬಿ.ವೈ. ರಾಘವೇಂದ್ರ ಅವರನ್ನು ಗೆಲ್ಲಿಸಬೇಕು ಎಂದು ಮತದಾರರಿಗೆ ಮನವಿ ಮಾಡಿದರು.
ಶಿವಮೊಗ್ಗ ಸಂಸದರಾಗಿದ್ದ ಬಿ.ಎಸ್. ಯಡಿಯೂರಪ್ಪ ಅವರು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡಿ ಗೆಲುವು ಸಾಧಿಸಿದ್ದರಿಂದ ಸಂಸದ ಸ್ಥಾನಕ್ಕೆ ರಾಜಿನಾಮೆ ನೀಡಿದ್ದರು. ಅವರಿಂದ ತೆರವಾಗಿದ್ದ ಸ್ಥಾನಕ್ಕೆ ಈಗ ಉಪ ಚುನಾವಣೆ ನಡೆಯುತ್ತಿದೆ.
ಉಪ ಚುನಾವಣೆಯಲ್ಲಿ ಆಡಳಿತರೂಢ ಕಾಂಗ್ರೆಸ್ ಮತ್ತು ಜೆಡಿಎಸ್ ಹೊಂದಾಣಿಕೆ ಮಾಡಿಕೊಳ್ಳಲಿವೆಯೇ ಅಥವಾ ಎರಡೂ ಪಕ್ಷಗಳು ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲಿವೆಯೇ ಎನ್ನುವುದು ಈಗ ಕುತೂಹಲ ಮೂಡಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com