ಸಂಪುಟ ವಿಸ್ತರಣೆ ವಿಳಂಬ ಪ್ರಜಾಪ್ರಭುತ್ವದ ಕಗ್ಗೊಲೆ: ಬಿಸಿ ಪಾಟೀಲ್

Published On :
ಬೆಂಗಳೂರು: ಪದೇಪದೆ ಸಂಪುಟ ವಿಸ್ತರಣೆ ಮುಂದೂಡಿಕೆಯಾಗುತ್ತಿರುವುದರಿಂದ ಕೆರಳಿದ ಕಾಂಗ್ರೆಸ್ ಶಾಸಕ ಬಿ.ಸಿ.ಪಾಟೀಲ್ ಅವರು, ಇದು ಪ್ರಜಾಪ್ರಭುತ್ವದ ಕಗ್ಗೊಲೆ ಮತ್ತು ಶಾಸಕರಿಗೆ ಮಾಡುತ್ತಿರುವ ಅವಮಾನ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅಕ್ಟೋಬರ್ 10 ಅಥವಾ 12ರಂದು ಕಾಂಗ್ರೆಸ್ - ಜೆಡಿಎಸ್ ಸಮ್ಮಿಶ್ರ ಸರ್ಕಾರದ ಸಂಪುಟ ವಿಸ್ತರಣೆ ಮಾಡುವ ಸಾಧ್ಯತೆ ಇತ್ತು. ಆದರೆ ಈಗ ರಾಜ್ಯದ ಮೂರು ಲೋಕಸಭಾ ಮತ್ತು ಎರಡು ವಿಧಾನಸಭೆ ಕ್ಷೇತ್ರಗಳಿಗೆ ಉಪ ಚುನಾವಣೆ ಘೋಷಣೆಯಾಗಿದ್ದು, ಚುನಾವಣೆ ಮುಗಿಯುವವರೆಗೆ ಸಂಪುಟ ವಿಸ್ತರಣೆ ಮಾಡದಿರಲು ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಸಚಿವ ಸ್ಥಾನದ ಆಕಾಂಕ್ಷಿಯಾಗಿರುವ ಬಿಸಿ ಪಾಟೀಲ್ ಅವರು ಇಂದು ಟ್ವೀಟ್ ಮೂಲಕ ತೀವ್ರ ಅಸಮಧಾನಾ ಹೊರ ಹಾಕಿದ್ದಾರೆ.
ಕರ್ನಾಟಕದಲ್ಲಿ ಸಚಿವ ಸಂಪುಟ ವಿಸ್ತರಣೆಯನ್ನು ಮುಂದೂಡುತ್ತಿರುವ ಕ್ರಮ ಶಾಸಕರನ್ನು ಅವಮಾನ ಮಾಡಿದ ಹಾಗೆ ಪ್ರಜಾಪ್ರಭುತ್ವವನ್ನು ಹತ್ಯೆಗೈದ ಹಾಗೆ, ಪಕ್ಷದ ಹೆಸರಿನಲ್ಲಿ ಈಗ ಸರ್ವಾಧಿಕಾರಿ ಧೋರಣೆಯನ್ನು ಎತ್ತಿ ಹಿಡಿಯಲಾಗುತ್ತಿದೆ ಎಂದು ಬಿಸಿ ಪಾಟೀಲ್ ಪಕ್ಷದ ವಿರುದ್ದ ಟೀಕೆ ಮಾಡಿದ್ದಾರೆ.
ಬಿಸಿ ಪಾಟೀಲ್ ಅವರು ತಮ್ಮ ಟ್ವೀಟ್ ಗೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹಾಗೂ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಅವರನ್ನು ಟ್ಯಾಗ್ ಮಾಡಿ ಶಾಕ್ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


