ಕಾಂಗ್ರೆಸ್ ಎಂಎಲ್'ಸಿ ಸಿಎಂ ಲಿಂಗಪ್ಪ ಪುತ್ರ ಚಂದ್ರಶೇಖರ್ ಲಿಂಗಪ್ಪ ಶೀಘ್ರದಲ್ಲೇ ಬಿಜೆಪಿಗೆ

ರಾಮನಗರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ದಿನಾಂಕ ಘೋಷಣೆಯಾದ ಬೆನ್ನಲ್ಲೇ ಜಿಲ್ಲೆಯಲ್ಲಿ ರಾಜಕೀಯ ಚಟುವಟಿಕೆಗಳು ತೀವ್ರಗೊಂಡಿದ್ದು, ಕಾಂಗ್ರೆಸ್ ಹಿರಿಯ ನಾಯಕ ಸಿ.ಎಂ. ಲಿಂಗಪ್ಪ ಅವರ ಪುತ್ರ ಚಂದ್ರಶೇಖರ್ ಲಿಂಗಪ್ಪ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಬೆಂಗಳೂರು: ರಾಮನಗರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ದಿನಾಂಕ ಘೋಷಣೆಯಾದ ಬೆನ್ನಲ್ಲೇ ಜಿಲ್ಲೆಯಲ್ಲಿ ರಾಜಕೀಯ ಚಟುವಟಿಕೆಗಳು ತೀವ್ರಗೊಂಡಿದ್ದು, ಕಾಂಗ್ರೆಸ್ ಹಿರಿಯ ನಾಯಕ ಸಿ.ಎಂ. ಲಿಂಗಪ್ಪ ಅವರ ಪುತ್ರ ಚಂದ್ರಶೇಖರ್ ಲಿಂಗಪ್ಪ ಅವರು ಶೀಘ್ರದಲ್ಲಿಯೇ ಬಿಜೆಪಿಗೆ ಸೇರ್ಪಡೆಗೊಳ್ಳಲಿದ್ದಾರೆಂದು ಹೇಳಲಾಗುತ್ತಿದೆ. 
ಚಂದ್ರಶೇಖರ್ ಲಿಂಗಪ್ಪ ಅವರು ಬಿಡದಿ ಬಳಿಯಿರುವ ಹೋಟೆಲ್ ವೊಂದರಲ್ಲಿ ಮಾಜಿ ಶಾಸಕ ಸಿ.ಪಿ.ಯೋಗೇಶ್ವರ್, ಬಿಜೆಪಿ ಜಿಲ್ಲಾಧ್ಯಕ್ಷ ಬಿ.ರುದ್ರೇಶ್ ಅವರೊಂದಿಗೆ ಮಾತುಕತೆ ನಡೆಸಿದ್ದಾರೆಂದು ಹೇಳಲಾಗುತ್ತಿದ್ದು, ಕಾಂಗ್ರೆಸ್ ನಲ್ಲಿ ಸೂಕ್ತ ಸ್ಥಾನಮಾನ ಸಿಗದ ಕಾರಣ ಬಿಜೆಪಿಗೆ ಸೇರ್ಪಡೆಗೊಳ್ಳುವ ನಿರ್ಧಾರ ತೆಗೆದುಕೊಂಡಿದ್ದಾರೆಂದು ವರದಿಗಳು ತಿಳಿಸಿವೆ. 
ರಾಮನಗರ ಮತ್ತು ಚನ್ನಪಟ್ಟಣ ಕ್ಷೇತ್ರದಲ್ಲಿ ಸ್ಪರ್ಧಿಸಿ ಗೆದ್ದಿದ್ದ ಕುಮಾರಸ್ವಾಮಿಯವರು ಮುಖ್ಯಮಂತ್ರಿಗಳಾದ ಬಳಿಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದೀಗ ಈ ಕ್ಷೇತ್ರಕ್ಕೆ ಕುಮಾರಸ್ವಾಮಿಯವರ ಪತ್ನಿ ಅನಿತಾ ಕುಮಾರಸ್ವಾಮಿಯವರನ್ನು ನಿಲ್ಲಿಸಲು ಜೆಡಿಎಸ್ ಚಿಂದನೆ ನಡೆಸಿದೆ.

ಕಾಂಗ್ರೆಸ್ ಪಕ್ಷ ಕಾರ್ಯಕರ್ತ ಸಭೆಯಲ್ಲಿ ಪಾಲ್ಕೊಂಡಿದ್ದ ಚಂದ್ರಶೇಖರ್ ಲಿಂಗಪ್ಪ ಅವರು ಬಿಜೆಪಿ ಸೇರ್ಪಡೆಗೊಳ್ಳುವುದಾಗಿ ಘೋಷಣೆ ಮಾಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಯಾಗಿರಬೇಕೆಂಬ ನಿರ್ಧಾರ ತಪ್ಪೆಂದು ಎನಿಸತೊಡಗಿದೆ ಎಂದು ಹೇಳಿಕೊಂಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com