ನರೇಂದ್ರ ಮೋದಿ-ಬಿಎಸ್ ಯಡಿಯೂರಪ್ಪ
ರಾಜಕೀಯ
ಮುಂದಿನ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ಮೋದಿ ಕರ್ನಾಟಕದಿಂದ ಸ್ಪರ್ಧಿಸಲ್ಲ: ಯಡಿಯೂರಪ್ಪ
ಪ್ರಧಾನಿ ನರೇಂದ್ರ ಮೋದಿ ಅವರು ಮುಂದಿನ ಲೋಕಸಭೆ ಚುನಾವಣೆಯಲ್ಲಿ ದಕ್ಷಿಣ ಭಾರತದ ಕರ್ನಾಟಕದಿಂದ ಸ್ಪರ್ಧೆ ಮಾಡಲಿದ್ದಾರೆ ಎಂದು ಹೇಳಲಾಗುತ್ತಿತ್ತು...
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಮುಂದಿನ ಲೋಕಸಭೆ ಚುನಾವಣೆಯಲ್ಲಿ ದಕ್ಷಿಣ ಭಾರತದ ಕರ್ನಾಟಕದಿಂದ ಸ್ಪರ್ಧೆ ಮಾಡಲಿದ್ದಾರೆ ಎಂದು ಹೇಳಲಾಗುತ್ತಿತ್ತು. ಆದರೆ ಇದೀಗ ಬಿಜೆಪಿ ರಾಜ್ಯಾಧ್ಯಕ್ಷ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಈ ಸುದ್ದಿಯನ್ನು ತಳ್ಳಿ ಹಾಕಿದ್ದಾರೆ.
ಪ್ರಧಾನಿ ಮೋದಿ ಅವರು ಕರ್ನಾಟಕದಿಂದ ಸ್ಪರ್ಧಿಸಲಿದ್ದಾರೆ ಎಂಬ ಸುದ್ದಿಯ ಕುರಿತು ಸ್ಪಷ್ಟನೆ ನೀಡಿದ ಅವರು ಇದೆಲ್ಲಾ ಸತ್ಯಕ್ಕೆ ದೂರವಾದದ್ದು, ಇದರಲ್ಲಿ ವಾಸ್ತವ ಇಲ್ಲ. ಮೋದಿಯವರು ಇಲ್ಲಿ ಸ್ಪರ್ಧೆ ಮಾಡುತ್ತಾರೆಂಬುದು ಸುಳ್ಳು ಸುದ್ದಿ. ಇದು ಕೇವಲ ಊಹಾಪೋಹವಷ್ಟೇ ಎಂದು ಯಡಿಯೂರಪ್ಪ ಹೇಳಿದ್ದಾರೆ.
ಯಡಿಯೂರಪ್ಪ ನಿವಾಸದಲ್ಲಿ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಯನ್ನು ಆಯ್ಕೆ ಮಾಡುವ ಸಂಬಂಧ ಸಭೆ ನಡೆಸಲಾಯಿತು. ಸಭೆಯ ನಂತರ ಮಾತನಾಡಿದ ಬಿಎಸ್ವೈ ನಾಳೆ ಅಥವಾ ನಾಡಿದ್ದು ಬಿಜೆಪಿ ಕೋರ್ ಕಮಿಟಿ ಸಭೆ ನಡೆಸಿ ಅಭ್ಯರ್ಥಿಯ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಂಡು ಹೈಕಮಾಂಡ್ ಗೆ ವರದಿ ನೀಡುತ್ತೇನೆ ಎಂದು ತಿಳಿಸಿದರು.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ