ಸಭೆಯಲ್ಲಿ ಕಾಂಗ್ರೆಸ್ ನಾಯಕರು
ಸಭೆಯಲ್ಲಿ ಕಾಂಗ್ರೆಸ್ ನಾಯಕರು

ಉಪಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ: ಕಾಂಗ್ರೆಸ್'ನಲ್ಲಿ ಭುಗಿಲೆದ್ದ ಅಸಮಾಧಾನ

ಸ್ಥಳೀಯ ನಾಯಕರ ತೀವ್ರ ವಿರೋಧದ ನಡುವೆಯೂ ಎರಡು ವಿಧಾನಸಭಾ ಕ್ಷೇತ್ರ ಹಾಗೂ ಮೂರು ಲೋಕಸಭಾ ಕ್ಷೇತ್ರಗಳ ಉಪ ಚುನಾವಣೆಯನ್ನು ಜಂಟಿಯಾಗಿ ಎದುರಿಸಲು ಕಾಂಗ್ರೆಸ್ ಹಾಗೂ ಜೆಡಿಎಸ್ ನಿರ್ಧರಿಸಿದ್ದು, ಈ ಹಿನ್ನಲೆಯಲ್ಲಿ...
Published on
ಬೆಂಗಳೂರು: ಸ್ಥಳೀಯ ನಾಯಕರ ತೀವ್ರ ವಿರೋಧದ ನಡುವೆಯೂ ಎರಡು ವಿಧಾನಸಭಾ ಕ್ಷೇತ್ರ ಹಾಗೂ ಮೂರು ಲೋಕಸಭಾ ಕ್ಷೇತ್ರಗಳ ಉಪ ಚುನಾವಣೆಯನ್ನು ಜಂಟಿಯಾಗಿ ಎದುರಿಸಲು ಕಾಂಗ್ರೆಸ್ ಹಾಗೂ ಜೆಡಿಎಸ್ ನಿರ್ಧರಿಸಿದ್ದು, ಈ ಹಿನ್ನಲೆಯಲ್ಲಿ ಕಾಂಗ್ರೆಸ್ ನಲ್ಲಿ ತೀವ್ರ ಅತೃಪ್ತಿ ವ್ಯಕ್ತವಾಗತೊಡಗಿದೆ. 
ನಿನ್ನೆ ತಡರಾತ್ರಿ ನಡೆದ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಹಾಗೂ ಕಾಂಗ್ರೆಸ್ ನಾಯಕರ ಸಭೆಯಲ್ಲಿ ಈ ತೀರ್ಮಾನವನ್ನು ಕೈಗೊಳ್ಳಲಾಗಿದ್ದು, ನಿರೀಕ್ಷೆಯಂತೆಯೇ ರಾಮನಗರ ವಿಧಾನಸಭಾ ಕ್ಷೇತ್ರ, ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಗಳನ್ನು ಮತ್ತು ಜಮಖಂಡಿ ವಿಧಾನಸಭಾ ಕ್ಷೇತ್ರ, ಬಳ್ಳಾರಿ ಹಾಗೂ ಶಿವಮೊಗ್ಗ ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲು ಮತ್ತು ಜಂಟಿ ಪ್ರಚಾರಾಂದೋಲನ ನಡೆಸಿ ಬಿಜೆಪಿಗೆ ಎಲ್ಲಾ ಐದೂ ಕ್ಷೇತ್ರಗಳಲ್ಲೂ ಸೋಲುಣಿಸಲು ತೀರ್ಮಾನಿಸಲಾಗಿದೆ. 
ಐದು ಕ್ಷೇತ್ರಗಳ ಉಪ ಚುನಾವಣೆ ಬಗ್ಗೆ ದಿನವಿಡೀ ನಡೆದ ಸರಣಿ ಸಭೆಗಳಲ್ಲಿ ಕಾಂಗ್ರೆಸ್ ಸ್ಥಳೀಯ ನಾಯಕರ ಅಭಿಪ್ರಾಯಗಳನ್ನೂ ಕೂಡ ಸಂಗ್ರಹಿಸಲಾಯಿತು. 
ಬಳಿಕ ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ತಡರಾತ್ರಿ ದೇವೇಗೌಡ ಹಾಗೂ ಸಮನ್ವಯ ಸಮಿತಿ ಸಂಚಾಲಕ ಡ್ಯಾನಿಶ್ ಅಲಿ ಅವರೊಂದಿಗೆ ಸಭೆ ನಡೆಸಿ ತೀರ್ಮಾನ ಕೈಗೊಂಡರು. 
ಸಭೆಯಲ್ಲಿ ಜಮಖಂಡಿ ವಿಧಾನಸಭಾ ಕ್ಷೇತ್ರಕ್ಕೆ ದಿವಂಗತ ಸಿದ್ದು ನ್ಯಾಮಗೌಡ ಅವರ ಪುತ್ರ ಆನಂದ್ ನ್ಯಾಮಗೌಡ ಅವರ ಹೆಸರನ್ನು ಅಂತಿಮಗೊಳಿಸಿದರು. 
ಇನ್ನು ಬಳ್ಳಾರಿ ಕ್ಷೇತ್ರಕ್ಕೆ ಕಾಂಗ್ರೆಸ್ ಶಾಸಕ ನಾಗೇಂದ್ರ ಅವರ ಸಹೋದರ ವೆಂಕಟೇಶ್ ಪ್ರಸಾದ್, ಮಾಜಿ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷ ನೆಟ್ಟಕಲ್ಲಪ್ಪ ಅವರಿಗೆ ಟಿಕೆಟ್ ನೀಡಲು ನಿರ್ಧಾರ ಕೈಗೊಳ್ಳಲಾಗಿದ್ದು, ಇನ್ನೆರಡು ದಿನಗಳಲ್ಲಿ ಪಕ್ಷದ ಹೈಕಮಾಂಡ್ ಈ ಕುರಿತು ಅಂತಿಮ ನಿರ್ಧಾರ ತೆಗೆದುಕೊಳ್ಳಲಿದೆ. 
ಈ ನಡುವೆ ಜೆಡಿಎಸ್'ಗೆ ಮಂಡ್ಯ ಹಾಗೂ ರಾಮನಗರ ವಿಧಾನಸಭಾ ಕ್ಷೇತ್ರಬಿಟ್ಟುಕೊಟ್ಟಿರುವ ಹಿನ್ನಲೆಯಲ್ಲಿ ಕಾಂಗ್ರೆಸ್ ನಲ್ಲಿ ಅಸಮಾಧಾನಗಳು ಭುಗಿಲೆದ್ದಿವೆ. ಇದು ಬಿಜೆಪಿ ಪಕ್ಷಕ್ಕೆ ಲಾಭ ಮಾಡಿಕೊಡಲಿದೆ ಎಂದು ಹೇಳಲಾಗುತ್ತಿದೆ. 
ರಾಮನಗರ ಕ್ಷೇದ್ರದಲ್ಲಿ ಕುಮಾರಸ್ವಾಮಿ ವಿರುದ್ಧ ಸ್ಪರ್ಧಿಸಿದ್ದ ಕಾಂಗ್ರೆಸ್'ನ ಇಕ್ಬಾಲ್ ಹುಸೇನ್ ಅವರು ಜೆಡಿಎಸ್'ಗೆ ಎರಡು ಕ್ಷೇತ್ರಗಳನ್ನು ಬಿಟ್ಟುಕೊಟ್ಟಿರುವುದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕುಮಾರಸ್ವಾಮಿ ವಿರುದ್ಧ ರಾಮನಗರಲ್ಲಿ ಸ್ಪರ್ಧಿಸಿದ್ದಾಗ 69,000 ಮತಗಳನ್ನು ಪಡೆದುಕೊಂಡಿದ್ದೆ. ಜೆಡಿಎಸ್'ಗೆ ರಾಮನಗರ ಕ್ಷೇತ್ರ ಬಿಟ್ಟುಕೊಡಲು ನಮಗಿಷ್ಟವಿಲ್ಲ ಎಂದು ಹೇಳಿದ್ದಾರೆ. ಇದರಂತೆ ಕಾಂಗ್ರೆಸ್ ಹಿರಿಯ ನಾಯಕ ಸಿ.ಎಂ ಲಿಂಗಪ್ಪ ಕೂಡ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com