ಸಿಗದ ಸಮರ್ಥ ಅಭ್ಯರ್ಥಿ: ಶಿವಮೊಗ್ಗ ಲೋಕಸಭೆ ಕ್ಷೇತ್ರವನ್ನು ಜೆಡಿಎಸ್ ಗೆ ಬಿಟ್ಟುಕೊಡಲು 'ಕೈ' ನಿರ್ಧಾರ!

ಶಿವಮೊಗ್ಗ ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿಯ ಬಿಎಸ್ ಯಡಿಯೂರಪ್ಪ ಪುತ್ರ ರಾಘವೇಂದ್ರ ಅವರ ವಿರುದ್ಧ ಸ್ಪರ್ಧಿಸಲು ಕಾಂಗ್ರೆಸ್ ಗೆ ಸಮರ್ಥ ಅಭ್ಯರ್ಥಿ ಸಿಗದ ಕಾರಣ ಈ ...
ಮಧು ಬಂಗಾರಪ್ಪ ಮತ್ತು ಕಿಮ್ಮನೆ ರತ್ನಾಕರ್
ಮಧು ಬಂಗಾರಪ್ಪ ಮತ್ತು ಕಿಮ್ಮನೆ ರತ್ನಾಕರ್
Updated on
ಬೆಂಗಳೂರು:  ಶಿವಮೊಗ್ಗ ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿಯ ಬಿಎಸ್ ಯಡಿಯೂರಪ್ಪ ಪುತ್ರ ರಾಘವೇಂದ್ರ ಅವರ ವಿರುದ್ಧ ಸ್ಪರ್ಧಿಸಲು ಕಾಂಗ್ರೆಸ್ ಗೆ ಸಮರ್ಥ ಅಭ್ಯರ್ಥಿ ಸಿಗದ ಕಾರಣ ಈ ಕ್ಷೇತ್ರವನ್ನು  ಜೆಡಿಎಸ್ ಗೆ ಬಿಟ್ಟುಕೊಡಲು ಕಾಂಗ್ರೆಸ್ ನಿರ್ಧರಿಸಿದೆ.
ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದ ಪಾಲುದಾರ ಪಕ್ಷಗಳ ಸೀಟು ಹಂಚಿಕೆ ಒಪ್ಪಂದದ ಪ್ರಕಾರ,ಬಳ್ಳಾರಿ, ಶಿವಮೊಗ್ಗ ಮತ್ತು ಜಮಖಂಡಿ ಕ್ಷೇತ್ರಗಳಿಂದ ಕಾಂಗ್ರೆಸ್ ಅಭ್ಯರ್ಥಿ ಹಾಗೂ ರಾಮನಗರ ಮತ್ತು ಮಂಡ್ಯ ಕ್ಷೇತ್ರ ಗಳಲ್ಲಿ ಜೆಡಿಎಸ್ ಅಭ್ಯರ್ಥಿ ಕಣಕ್ಕಿಳಿಸುವಂತೆ ಒಪ್ಪಂದ ಮಾಡಿಕೊಳ್ಳಲಾಗಿದೆ. ಯಡಿಯೂರಪ್ಪ ಪುತ್ರನ ವಿರುದ್ಧ ಸಮರ್ಥ ಅಭ್ಯರ್ಥಿ ಆಯ್ಕೆ ಮಾಡುವುದು ಕಠಿಣವಾಗಿರುವುದಾಗಿ ಎಐಸಿಸಿ ಪ್ರಧಾನ ಕಾರ್ಯದರ್ಶಿ  ಕೆ, ಸಿ ವೇಣುಗೋಪಾಲ್ ಹೇಳಿದ್ದರು, 
ಶಿವಮೊಗ್ಗದಲ್ಲಿ ಜೆಡಿಎಸ್ ನಿಂದ ಮಧು ಬಂಗಾರಪ್ಪ ಅವರನ್ನು ಕಣಕ್ಕಿಳಿಸಲು  ನಿನ್ನೆ ನಡೆದ ಸಭೆಯಲ್ಲಿ ನಿರ್ಧರಿಸಲಾಗಿದೆ,  ಬೇರೆ  ಇತರರಿಗೆ ಹೋಲಿಸಿದರೇ ಮಧು ಉತ್ತಮ ಅಭ್ಯರ್ಥಿ ಎಂಬ ಅಭಿಪ್ರಾಯ ಮೂಡಿದೆ, ಈಡಿಗ ಸಮುದಾಯದ ಮತಗಳನ್ನು ಸೆಳೆಯಲು ಮಧು ಬಂಗಾರಪ್ಪ ಸಮರ್ಥರಾಗಿದ್ದಾರೆ, ಹೀಗಾಗಿ ಅವರನ್ನೆ ಕಣಕ್ಕಿಳಿಸುವುದು ಸರಿ ಎಂಬುದು ನಾಯಕರ ಅಭಿಪ್ರಾಯವಾಗಿದೆ, ಇದಕ್ಕೆ ಕಾಂಗ್ರೆಸ್ ಕೂಡ ಒಪ್ಪಿಗೆ ನೀಡಿದೆ ಎಂದು ಮೂಲಗಳು ತಿಳಿಸಿವೆ.
ಶಿವಮೊಗ್ಗದಿಂದ ಕಣಕ್ಕಿಳಿಸಲು ಕಾಂಗ್ರೆಸ್ ಟಿಎನ್ ಶ್ರೀನಿವಾಸ್ ಮತ್ತು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರನ್ನು ಪಟ್ಟಿ ಮಾಡಿದೆ.  ಆದರೆ ಉಪ ಚುನಾವಣೆಯಿಂದ ಹಣ ಹಾಗೂ ಶಕ್ತಿಯ ವ್ಯಯ ಮಾಡುವುದು ವ್ಯರ್ಥ ಎಂದು ತಿಳಿದಿರುವ ಕಿಮ್ಮನೆ ರತ್ನಾಕರ್ ಚುನಾವಣೆಯಿಂದ ದೂರ ಉಳಿಯಲು ನಿರ್ಧರಿಸಿ ಆಸಕ್ತಿ ತೋರುತ್ತಿಲ್ಲ,  ಮತ್ತೊಬ್ಬ ಅಭ್ಯರ್ಥಿ ಶ್ರೀನಿವಾಸ್ ಮಾಜಿ ಸಿಎಂ ಪುತ್ರನ ವಿರುದ್ಧ ಫೈಟ್ ನೀಡುವಷ್ಟು ಸಮರ್ಥರಿಲ್ಲ ಎಂಬುದಾಗಿ ಅಭಿಪ್ರಾಯ ಪಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ಶಿವಮೊಗ್ಗ ಲೋಕಸಭೆ ಕ್ಷೇತ್ರದ ಉಪ ಚುನಾವಣೆ ಅಭ್ಯರ್ಥಿಯಾಗಿ ಮಧು ಬಗಾರಪ್ಪ ಅವರನ್ನು ಕಣಕ್ಕಿಳಿಸಲು ಸಿಎಂ ಕುಮಾರ ಸ್ವಾಮಿ ಮನವೊಲಿಸಲು ಪ್ರಯತ್ನಿಸುತ್ತಿದ್ದಾರೆ, ಆದರೆ ಸದ್ಯ ಮಧು ಬಂಗಾರಪ್ಪ ಡೆನ್ಮಾರ್ಕ್ ಪ್ರವಾಸದಲ್ಲಿದ್ದಾರೆ, ಅವರು ಭಾರತಕ್ಕೆ ವಾಪಾಸಾದ ನಂತರ ಅವರ ಜೊತೆ ಮಾತನಾಡಿ ಟಿಕೆಟ್ ಘೋಷಿಸಲಾಗುವುದು ಎಂದು ತಿಳಿಸಿದ್ದಾರೆ.
ಕಾಂಗ್ರೆಸ್ ಅಥವಾ ಜೆಡಿಎಸ್ ಅಭ್ಯರ್ಥಿ ಯಾರೇ ಆಗಿರಲಿ, ಬಿಜೆಪಿ ಸೋಲಿಸುವುದು ನಮ್ಮ ಉದ್ದೇಶ ಎಂಬುದು ಇಲ್ಲಿನ ನಾಯಕರ ಆಶಯವಾಗಿದೆ ಎಂದು ಮೂಲಗಳು ತಿಳಿಸಿವೆ.
ಶಿವಮೊಗ್ಗ ಕ್ಷೇತ್ರವನ್ನು ಜೆಡಿಎಸ್ ಗೆ ಬಿಟ್ಟುಕೊಡುವುದು ಪಕ್ಷಕ್ಕೆ ಸುಲಭದ ಮಾತಲ್ಲ, ಮಂಡ್ಯ ಮತ್ತು ರಾಮನಗರ ಕ್ಷೇತ್ರಗಳಲ್ಲಿ ಕಾರ್ಯಕರ್ತರು ವಿರೋಧಿಸಿದ್ದರು, ಇವೆರಡು ಕ್ಷೇತ್ರಗಳು ಜೆಡಿಎಸ್ ಭದ್ರಕೋಟೆ, ಹಾಗೆಯೇ ಶಿವಮೊಗ್ಗ ಕೂಡ ಮಾಜಿ ಸಿಎಂ ಯಡಿಯೂರಪ್ಪ ಅವರ ಭದ್ರಕೋಟೆ ಎಂದೇ ಪರಿಗಣಿತವಾಗಿದೆ, ಹೀಗೀದ್ದಾಗ್ಯೂ ಪಕ್ಷದಿಂದ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಕೈ ನಾಯಕರು ಪ್ರಯತ್ನಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com