ನನ್ನ ಆತ್ಮತೃಪ್ತಿಗಾಗಿ ಬಿಜೆಪಿಗೆ ಸೇರ್ಪಡೆಯಾಗಿದ್ದೇನೆ. ಕಾಂಗ್ರೆಸ್ ನಲ್ಲಿ ಉಸಿರುಗಟ್ಟಿಸುವ ವಾತಾವರಣವಿದೆ. ನಮ್ಮ ಕ್ಷೇತ್ರದ ಸಂಪೂರ್ಣ ಅಭಿವೃದ್ಧಿ ಮಾಡುವುದು ನನ್ನ ಗುರಿಯಾಗಿದೆ. ಹಾಗೂ ಜೆಡಿಎಸ್ ಸೋಲಿಸುವುದೇ ನನ್ನ ಪ್ರಮುಖ ಉದ್ದೇಶ. ನನಗೆ ಯಾವುದೇ ಕರ್ತವ್ಯ ವಹಿಸಿದರು ಶ್ರಮವಹಿಸಿ ಕೆಲಸ ಮಾಡಲು ನಾನು ಸಿದ್ದನಿದ್ದೇನೆ, ಯಾವುದೇ ಷರತ್ತಿಲ್ಲದೇ ನಾನು ಬಿಜೆಪಿ ಸೇರಿದ್ದೇನೆ. ಪಕ್ಷವನ್ನು ಕ್ಷೇತ್ರದಲ್ಲಿ ಬಲಗೊಳಿಸುವತ್ತ ಗಮನ ಹರಿಸುತ್ತೇನೆ ಚಂದ್ರಶೇಖರ್ ಲಿಂಗಪ್ಪ ಹೇಳಿದ್ದಾರೆ.