ಲೋಕಸಭೆ ಉಪ ಚುನಾವಣೆಯಲ್ಲಿ ನಮ್ಮ ಕುಟುಂಬದಿಂದ ಯಾರೂ ಸ್ಪರ್ಧಿಸುತ್ತಿಲ್ಲ: ದೇವೇಗೌಡ

ನವೆಂಬರ್ 3 ರಂದು ನಡೆಯುತ್ತಿರುವ ಲೋಕಸಭೆ ಉಪ ಚುನಾವಣೆಯಲ್ಲಿ ನಮ್ಮ ಕುಟುಂಬದ ಯಾವುದೇ ಸದಸ್ಯರು ಸ್ಪರ್ಧಿಸುತ್ತಿಲ್ಲ ಎಂದು ಮಾಜಿ ಪ್ರಧಾನಿ ಎಚ್ .ಡಿ ...
ಎಚ್.ಡಿ ದೇವೇಗೌಡ
ಎಚ್.ಡಿ ದೇವೇಗೌಡ
ವಿಜಯಪುರ: ನವೆಂಬರ್ 3 ರಂದು ನಡೆಯುತ್ತಿರುವ ಲೋಕಸಭೆ ಉಪ ಚುನಾವಣೆಯಲ್ಲಿ ನಮ್ಮ ಕುಟುಂಬದ ಯಾವುದೇ ಸದಸ್ಯರು ಸ್ಪರ್ಧಿಸುತ್ತಿಲ್ಲ ಎಂದು ಮಾಜಿ ಪ್ರಧಾನಿ ಎಚ್ .ಡಿ ದೇವೇಗೌಡ ಹೇಳಿದ್ದಾರೆ.
ಸಿಂಧಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಶೀಘ್ರವೇ ಮಂಡ್ಯ, ಶಿವಮೊಗ್ಗ ಕ್ಷೇತ್ರಗಳಿಗೆ ಶೀಘ್ರವೇ ಅಭ್ಯರ್ಥಿಗಳನ್ನು ಘೋಷಿಸಲಾಗುವುದು ಎಂದು ಹೇಳಿದ್ದಾರೆ. ಮಂಡ್ಯ ಉಪ ಚುನಾವಣೆಯಲ್ಲಿ ಸ್ಥಳೀಯ ನಾಯಕರಿಗೆ ಸ್ಪರ್ಧಿಸಲು ಅವಕಾಶ ನೀಡಲಾಗುತ್ತದೆ. ಶೀಘ್ರವೇ ಅಭ್ಯರ್ಥಿಗಳ ಹೆಸರು ಪ್ರಕಟಿಸಲಾಗುತ್ತದೆ, ಆದರೆ ನಮ್ಮ ಕುಟುಂಬದಿಂದ ಯಾರೂ ಸ್ಪರ್ಧಿಸುತ್ತಿಲ್ಲ ಎಂದು ಹೇಳಿದ್ದಾರೆ.
ಶಿವಮೊಗ್ಗ ಲೋಕಸಭೆ ಕ್ಷೇತ್ರದ ಉಪ ಚುನಾವಣೆ ಅಭ್ಯರ್ಥಿಯಾಗಿ ಮಧು ಬಗಾರಪ್ಪ ಅವರನ್ನು ಕಣಕ್ಕಿಳಿಸಲು ಸಿಎಂ ಕುಮಾರ ಸ್ವಾಮಿ ಮನವೊಲಿಸಲು ಪ್ರಯತ್ನಿಸುತ್ತಿದ್ದಾರೆ, ಆದರೆ ಸದ್ಯ ಮಧು ಬಂಗಾರಪ್ಪ ಡೆನ್ಮಾರ್ಕ್ ಪ್ರವಾಸದಲ್ಲಿದ್ದಾರೆ, ಅವರು ಭಾರತಕ್ಕೆ ವಾಪಾಸಾದ ನಂತರ ಅವರ ಜೊತೆ ಮಾತನಾಡಿ ಟಿಕೆಟ್ ಘೋಷಿಸಲಾಗುವುದು ಎಂದು ತಿಳಿಸಿದ್ದಾರೆ.
ಒಂದು ವೇಳೆ ಶಿವಮೊಗ್ಗದಿಂದ ಸ್ಪರ್ಧಿಸಲು ಮಧು ಬಂಗಾರಪ್ಪ ನಿರಾಕರಿಸಿದರೇ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ ನೀಡುತ್ತೇವೆ, ಹಾಗೂ ಬಳ್ಳಾರಿಯಲ್ಲೂ ಕೂಡ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ ನೀಡುತ್ತೇವೆ ಎಂದು ಘೋಷಿಸಿದ್ದಾರೆ,  ಎಲ್ಲಾ ಐದು ಕ್ಷೇತ್ರಗಳಲ್ಲೂ ಒಟ್ಟೊಟ್ಟಿಗೆ ಪ್ರಚಾರ ಕಾರ್ಯದಲ್ಲಿ ಭಾಗವಹಿಸುವುದಾಗಿ ಹೇಳಿದ್ದಾರೆ, ದೇಶಾದ್ಯಂತ ಕೇಸರಿ ಪಕ್ಷ  ಕೋಮು ಸಂಘರ್ಷ ಮೂಡಿಸುತ್ತಿದೆ ಎಂದು ಆರೋಪಿಸಿದ್ದಾರೆ.
ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳ ಬಗ್ಗೆ ಪ್ರತಿಕ್ರಿಯಿಸಿದ ಅವರು,ಸಮ್ಮಿಶ್ರ ಸರ್ಕಾರದ ಬಗ್ಗೆ ಇಲ್ಲ ಸಲ್ಲದ ಮಾತುಗಳು ಕೇಳಿ ಬರುತ್ತಿವೆ, ಸರ್ಕಾರ ಸುಭದ್ರವಾಗಿದೆ, ಸಮ್ಮಿಶ್ರ ಸರ್ಕಾರ ಇನ್ನು 5 ವರ್ಷ ಅಧಿಕಾರ ಪೂರೈಸಲಿದೆ ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com