ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್
ರಾಜಕೀಯ
ಬಳ್ಳಾರಿ ಉಪಚುನಾವಣೆ ಅಭ್ಯರ್ಥಿ ಕುರಿತು ರಾಹುಲ್ ಗಾಂಧಿ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ: ಕೆಪಿಸಿಸಿ ಅಧ್ಯಕ್ಷ
ಬಳ್ಳಾರಿ ಲೋಕಸಭಾ ಉಪಚುನಾವಣೆ ಅಭ್ಯರ್ಥಿ ಆಯ್ಕೆ ಕುರಿತು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಶುಕ್ರವಾರ ಹೇಳಿದ್ದಾರೆ...
ಬೆಂಗಳೂರು: ಬಳ್ಳಾರಿ ಲೋಕಸಭಾ ಉಪಚುನಾವಣೆ ಅಭ್ಯರ್ಥಿ ಆಯ್ಕೆ ಕುರಿತು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಶುಕ್ರವಾರ ಹೇಳಿದ್ದಾರೆ.
ಎರಡು ಸಂಸತ್ ಹಾಗೂ ಎರಡು ವಿಧಾನ ಸಭೆ ಕ್ಷೇತ್ರಗಳಿಗೆ ಕಾಂಗ್ರೆಸ್ ತನ್ನ ಅಭ್ಯರ್ಥಿ ಆಯ್ಕೆ ಮಾಡುವಲ್ಲಿ ವಿಫಲವಾಗಿದೆ, ಬಳ್ಳಾರಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಈಗಾಗಲೇ ಶ್ರೀರಾಮುಲು ಸಹೋದರಿ ಜೆ.ಶಾಂತ ಅವರ ಹೆಸರನ್ನು ಅಂತಿಮಗೊಳಿಸಿದ್ದರು, ಕಾಂಗ್ರೆಸ್ ನಲ್ಲಿ ಈಗಲೂ ಅಭ್ಯರ್ಥಿಗಳ ಆಯ್ಕೆ ಕುರಿತು ಒಮ್ಮತ ಮೂಡಿ ಬಂದಿಲ್ಲ.
ಈ ಹಿನ್ನಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ದಿನೇಶ್ ಗುಂಡೂರಾವ್ ಅವರು, ಬಳ್ಳಾರಿಯಲ್ಲಿ ಗೆಲವು ಸಾಧಿಸಲು ಕಾಂಗ್ರೆಸ್ ಸಿದ್ಧತೆಗಳನ್ನು ನಡೆಸಿದೆ. ಬಳ್ಳಾರಿ ಜಿಲ್ಲೆಯಲ್ಲಿ ಪಕ್ಷ ಬಲಿಷ್ಟವಾಗಿದೆ. ನಮ್ಮ 6 ಶಾಸಕರು ಒಗ್ಗಟ್ಟಿನಿಂದ ಇದ್ದು, ರಾಹುಲ್ ಗಾಂಧಿಯವರೊಂದಿಗೆ ಮಾತುಕತೆ ನಡೆಸಿ ಶೀಘ್ರದಲ್ಲಿಯೇ ಅಭ್ಯರ್ಥಿಯನ್ನು ಅಂತಿಮಗೊಳಿಸಲಾಗುತ್ತದೆ ೆಂದು ಹೇಳಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ