ಬಳ್ಳಾರಿ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಜೆ ಶಾಂತಾ

ಬಳ್ಳಾರಿ ಲೋಕಸಭೆ ಉಪ ಚುನಾವಣೆಯ ಕಣ ರಂಗೇರುತ್ತಿದ್ದು, ಮಂಗಳವಾರ ಬಿಜೆಪಿ ಅಭ್ಯರ್ಥಿ ಜೆ. ಶಾಂತಾ ನಾಮಪತ್ರ...
ನಾಮಪತ್ರ ಸಲ್ಲಿಸುತ್ತಿರುವ ಜೆ ಶಾಂತಾ
ನಾಮಪತ್ರ ಸಲ್ಲಿಸುತ್ತಿರುವ ಜೆ ಶಾಂತಾ
ಬಳ್ಳಾರಿ: ಬಳ್ಳಾರಿ ಲೋಕಸಭೆ ಉಪ ಚುನಾವಣೆಯ ಕಣ ರಂಗೇರುತ್ತಿದ್ದು, ಮಂಗಳವಾರ ಬಿಜೆಪಿ ಅಭ್ಯರ್ಥಿ ಜೆ. ಶಾಂತಾ ನಾಮಪತ್ರ ಸಲ್ಲಿಸಿದರು.
ನಾಮಪತ್ರ ಸಲ್ಲಿಸಲು ಜಿಲ್ಲಾಧಿಕಾರಿಗಳ ಕಚೇರಿಗೆ ಮೆರವಣಿಗೆ ಮೂಲಕ ಆಗಮಿಸಿದ ಜೆ ಶಾಂತಾ ಅವರಿಗೆ ಸಹೋದರ, ಬಿಜೆಪಿ ಶಾಸಕ ಬಿ. ಶ್ರೀರಾಮುಲು ಸಾಥ್ ನೀಡಿದರು.
ನಾಮಪತ್ರ ಸಲ್ಲಿಸಿದ ಬಳಿಕ ಮಾತನಾಡಿದ ಜೆ. ಶಾಂತಾ, ನಮ್ಮ ಪಕ್ಷದ ಸರ್ವಾನುಮತದ ಅಭ್ಯರ್ಥಿ ಆಗಿ ನನ್ನನ್ನು ಆಯ್ಕೆ ಮಾಡಿದ್ದಾರೆ. ನನ್ನನ್ನು ಅಭ್ಯರ್ಥಿಯಾಗಿ ಆಯ್ಕೆ ಮಾಡಿದ ನಾಯಕರಿಗೆ ಋಣಿಯಾಗಿದ್ದೇನೆ. ರಾಜ್ಯದ ಸಮಸ್ಯೆಗಳ ಬಗ್ಗೆ ಪ್ರಾಮಾಣಿಕ ಕೆಲಸ ಮಾಡುತ್ತೇನೆ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com