ಯಡಿಯೂರಪ್ಪಗೇ ದೊಡ್ಡ ಶಾಕ್ ಕಾದಿದೆ: ಸಿದ್ದರಾಮಯ್ಯ

ಯಡಿಯೂರಪ್ಪ ಅವರಿಗೆ ಸುಳ್ಳು ಹೇಳುವುದು ಬಿಟ್ಟು ಬೇರೆ ಏನು ಗೊತ್ತಿದೆ? ಅವರ ಮಾತಿಗೆ ಕಿಮ್ಮತ್ತು...
ಸಿದ್ದರಾಮಯ್ಯ,
ಸಿದ್ದರಾಮಯ್ಯ,
Updated on
ಬಾಗಲಕೋಟೆ: ಯಡಿಯೂರಪ್ಪ ಅವರಿಗೆ ಸುಳ್ಳು ಹೇಳುವುದು ಬಿಟ್ಟು ಬೇರೆ ಏನು ಗೊತ್ತಿದೆ? ಅವರ ಮಾತಿಗೆ ಕಿಮ್ಮತ್ತು ಕೊಡುವ ಅಗತ್ಯ ಇಲ್ಲ ಎಂದು ಮಂಗಳವಾರ 3ಗಂಟೆ ನಂತರ ಏನಾಗಲಿದೆ ಎಂದು ಕಾದು ನೋಡಿ ಎಂದಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ತಿರುಗೇಟು ನೀಡಿದ್ದಾರೆ.
ಇಂದು ಬಾಗಲಕೋಟೆ ಜಿಲ್ಲೆಯ ಜಮಖಂಡಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಸಿಎಂ, ಯಡಿಯೂರಪ್ಪ ಅವರಿಗೆ ಸುಳ್ಳು ಹೇಳುವ ಕೆಲಸ ಬಿಟ್ಟು ಬೇರೇನಿದೆ. ಶಾಕ್‌ ಅವರಿಗೆ ಹೊಡೆಯುತ್ತದೆ. ನಮಗೆ ಹೊಡೆಯುವುದಿಲ್ಲ. ಅವರಿಗೂ ದೊಡ್ಡ ಶಾಕ್ ಕಾದಿದೆ ಎಂದರು.
ಯಡಿಯೂರಪ್ಪ ಅವರು ಸಮ್ಮಿಶ್ರ ಸರ್ಕಾರ ಇವತ್ತು ಬೀಳುತ್ತೆ,ನಾಳೆ ಬೀಳುತ್ತೆ ಎಂದು ಹೇಳುತ್ತಾ ತಿರುಗಾಡುತ್ತಿದ್ದಾರೆ. ಸರ್ಕಾರ ಬಿತ್ತಾ' ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು. 
ಈ ಉಪ ಚುನಾವಣೆಯಲ್ಲಿ ಕಾಂಗ್ರೆಸ್ - ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಸಿದ್ದರಾಮಯ್ಯ, ಬಳ್ಳಾರಿ ಲೋಕ ಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ  ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡುತ್ತಾರೆ. ಯಾವುದೇ ಭಿನ್ನಮತ ಇಲ್ಲ ಎಲ್ಲವನ್ನೂ ವಿಚಾರ ಮಾಡಿಯೇ ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದೇವೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com