ಉಪ ಚುನಾವಣೆ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಗಟ್ಟಿಗೊಳಿಸಲಿದೆ: ಸಿಎಂ ಕುಮಾರಸ್ವಾಮಿ

ಲೋಕಸಭೆ ಹಾಗೂ ವಿಧಾನಸಭೆ ಉಪ ಚುನಾವಣೆ ಜೆಡಿಎಸ್-ಕಾಂಗ್ರೆಸ್ ಶಾಶ್ವತ ಮೈತ್ರಿಗೆ ನಾಂದಿ ಹಾಡಿದ್ದು,~...
ಮಧು ಬಂಗಾರಪ್ಪ ನಾಮಪತ್ರ ಸಲ್ಲಿಸುವ ಮುನ್ನ ಒಗ್ಗಟ್ಟು ಪ್ರದರ್ಶಿಸಿದ ಕಾಂಗ್ರೆಸ್, ಜೆಡಿಎಸ್ ನಾಯಕರು
ಮಧು ಬಂಗಾರಪ್ಪ ನಾಮಪತ್ರ ಸಲ್ಲಿಸುವ ಮುನ್ನ ಒಗ್ಗಟ್ಟು ಪ್ರದರ್ಶಿಸಿದ ಕಾಂಗ್ರೆಸ್, ಜೆಡಿಎಸ್ ನಾಯಕರು
ಶಿವಮೊಗ್ಗ: ಲೋಕಸಭೆ ಹಾಗೂ ವಿಧಾನಸಭೆ ಉಪ ಚುನಾವಣೆ ಜೆಡಿಎಸ್-ಕಾಂಗ್ರೆಸ್ ಶಾಶ್ವತ ಮೈತ್ರಿಗೆ ನಾಂದಿ ಹಾಡಿದ್ದು, ಇದು ಮುಂದಿನ ವರ್ಷ ನಡೆಯುವ ಲೋಕಸಭೆ ಚುನಾವಣೆಗೆ ದಿಕ್ಸೂಚಿಯಾಗಲಿದೆ ಎಂದು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಮಂಗಳವಾರ ಹೇಳಿದ್ದಾರೆ.
ಇಂದು ಶಿವಮೊಗ್ಲ ಲೋಕಸಭಾ ಉಪ ಚುನಾವಣೆಗೆ ಜೆಡಿಎಸ್ - ಕಾಂಗ್ರೆಸ್ ಮೈತ್ರಿಕೂಟದ ಅಭ್ಯರ್ಥಿಯಾಗಿ ಮಧು ಬಂಗಾರಪ್ಪ ಅವರು ನಾಮಪತ್ರ ಸಲ್ಲಿಸಿದರು. ಬಳಿಕ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಸಿಎಂ, ಇದು ಮೈತ್ರಿ ಶಕ್ತಿಯ ಪರೀಕ್ಷೆ. ಈ ಚುನಾವಣೆ ಯಾವುದೇ ವ್ಯಕ್ತಿಯ ವಿರುದ್ಧ ಅಲ್ಲ. ನಮ್ಮದು ಅಪವಿತ್ರ ಮೈತ್ರಿ ಎನ್ನುತ್ತಿರುವ ಬಿಜೆಪಿಗೆ ಈ ಉಪ ಚುನಾವಣೆಯಲ್ಲಿ ಮತದಾರರು ತಕ್ಕ ಉತ್ತರ ನೀಡಲಿದ್ದಾರೆ ಎಂದರು.
ಈ ಉಪ ಚುನಾವಣೆ 2019ರ ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ 25 ರಿಂದ 26 ಸ್ಥಾನ ಗೆಲ್ಲಲು ವೇದಿಕೆಯಾಗಲಿದೆ ಎಂದು ಸಿಎಂ ವಿಶ್ವಾಸ ವ್ಯಕ್ತಪಡಿಸಿದರು.
ಇದೇ ವೇಳೆ ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿನ ರೈತರ ಸಾಲ ಮನ್ನಾ ಆದೇಶ ಮುಂದಿನ ತಿಂಗಳು ಹೊರ ಬೀಳಲಿದೆ. ರೈತರ ಸಾಲ ಮನ್ನಾ ವಿಚಾರದಲ್ಲಿ ಸರ್ಕಾರ ಪಾರದರ್ಶಕವಾಗಿ ನಡೆದುಕೊಳ್ಳುತ್ತಿದೆ. ಆದರೆ ರೈತ ವಿರೋಧಿ ಬಿಜೆಪಿ ಸಮ್ಮಿಶ್ರ ಸರ್ಕಾರಕ್ಕೆ ಕೆಟ್ಟ ಹೆಸರು ತರಲು ವ್ಯವಸ್ಥಿತ ಸಂಚು ರೂಪಿಸುತ್ತಿದೆ ಎಂದು ಸಿಎಂ ವಾಗ್ದಾಳಿ ನಡೆಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com