ಉಪ ಚುನಾವಣೆಯಿಂದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಪಕ್ಷಗಳ ಬಾಂಧವ್ಯ ಮತ್ತಷ್ಟು ಗಟ್ಟಿ: ಪರಮೇಶ್ವರ

2019ರ ಲೋಕಸಭೆ ಚುನಾವಣೆಯ ಸೆಮಿಫೈನಲ್ ಎಂದೇ ಬಿಂಬಿತವಾಗಿರುವ ರಾಜ್ಯ ಲೋಕಸಭೆ ಹಾಗೂ ವಿಧಾನಸಭೆ ಉಪ ಚುನಾವಣೆಯಿಂದ
ಪರಮೇಶ್ವರ್
ಪರಮೇಶ್ವರ್
ಬೆಂಗಳೂರು: 2019ರ ಲೋಕಸಭೆ ಚುನಾವಣೆಯ ಸೆಮಿಫೈನಲ್ ಎಂದೇ ಬಿಂಬಿತವಾಗಿರುವ ರಾಜ್ಯ ಲೋಕಸಭೆ ಹಾಗೂ  ವಿಧಾನಸಭೆ ಉಪ ಚುನಾವಣೆಯಿಂದ ಮೈತ್ರಿ ಪಕ್ಷಗಳ ಬಾಂಧವ್ಯ ಮತ್ತಷ್ಚು ಗಟ್ಟಿಯಾಗಲಿದೆ ಎಂದು ಉಪಮುಖ್ಯಮಂತ್ರಿ ಜಿ.ಪರಮೇಶ್ವರ್ ಹೇಳಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಅವರು ಉಪಚುನಾವಣೆಯಲ್ಲಿ ಎಲ್ಲ ಐದು ಕ್ಷೇತ್ರಗಳನ್ನು ಜೆಡಿಎಸ್‌ -ಕಾಂಗ್ರೆಸ್‌ ಮೈತ್ರಿಕೂಟ ಗೆಲ್ಲುವ ಮೂಲಕ ರಾಜ್ಯ ಸಮ್ಮಿಶ್ರ ಸರಕಾರ ಸುಭದ್ರ ಎಂಬ ಸಂದೇಶ ನೀಡುತ್ತೇವೆ ಎಂದು ತಿಳಿಸಿದ್ದಾರೆ, 
''ಯಾವ ಪ್ರತಿಷ್ಠೆಯೂ ಇಲ್ಲದೆ ಎರಡೂ ಪಕ್ಷಗಳ ನಾಯಕರು ಗೆಲುವಿನ ಗುರಿಗಾಗಿ ಒಗ್ಗಟ್ಟಿನಿಂದ ಕೆಲಸ ಮಾಡುತ್ತೇವೆ'' ಎಂದು ಹೇಳಿದರು. 
''ಶಿವಮೊಗ್ಗವನ್ನು ಜೆಡಿಎಸ್‌ಗೆ ಬಿಟ್ಟುಕೊಡುವ ಮೂಲಕ ಕಾಂಗ್ರೆಸ್‌ ಕೈಚೆಲ್ಲಿದೆ ಎಂಬುದು ಸರಿಯಲ್ಲ. ಮೈತ್ರಿ ಧರ್ಮದಂತೆ ಕೊಡು -ಕೊಳ್ಳುವ ವ್ಯವಸ್ಥೆ ಮಾಡಿಕೊಂಡಿದ್ದೇವೆ.
ಬಳ್ಳಾರಿಗೂ ಎಲ್ಲರ ಜತೆ ಚರ್ಚಿಸಿ ಉಗ್ರಪ್ಪ ಅವರನ್ನು ಕಣಕ್ಕೆ ಇಳಿಸಲಾಗಿದೆ. ನಾಯಕರಲ್ಲಿ ಯಾವುದೇ ಅಸಮಾಧಾನ ಇಲ್ಲ.  ಜೊತೆಯಾಗಿ ಪ್ರಚಾರ ಮಾಡುವುದರಿಂದ ಅಭ್ಯರ್ಥಿ ಗೆಲುವಿಗೆ ಕಾರಣವಾಗುತ್ತದೆ ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com