'ಪ್ರತ್ಯೇಕ ಧರ್ಮ ಹೋರಾಟದಿಂದಾಗಿ ಕಾಂಗ್ರೆಸ್‍ಗೆ ಹಿನ್ನಡೆಯಾಗಿದೆ. ಇದಕ್ಕಾಗಿ ಸಮುದಾಯದ ಕ್ಷಮೆ ಕೇಳುತ್ತೇನೆ' ಎಂದು ನಿನ್ನೆ ಸಚಿವ ಡಿ.ಕೆ.ಶಿವಕುಮಾರ್ ಬಾಳೆಹೊನ್ನೂರಿನಲ್ಲಿ ಹೇಳಿಕೆ ನೀಡಿದ್ದರು. ಈ ಹೇಳಿಕೆ ಕುರಿತಂತೆ ತಮ್ಮದೇ ಪಕ್ಷದ ಮುಖಂಡರ ವಿರುದ್ಧ ಗರಂ ಆಗಿರುವ ಎಂಬಿ ಪಾಟೀಲ್, 'ರಾಜಕಾರಣವೇ ಬೇರೆ, ಧರ್ಮವೇ ಬೇರೆ. ಲಿಂಗಾಯತ ಸಮುದಾಯದ ಹೋರಾಟದಿಂದಾಗಿ ಕಾಂಗ್ರೆಸ್‍ಗೆ ಹಿನ್ನಡೆಯಾಯಿತು ಎಂಬುದು ಸರಿಯಲ್ಲ. ದಕ್ಷಿಣ ಕರ್ನಾಟಕ ಭಾಗದಲ್ಲಿ ಹೋರಾಟ ಹೆಚ್ಚು ಪರಿಣಾಮ ಬೀರಲಿಲ್ಲ. ಹಾಗಿದ್ದರೆ ಡಿ.ಕೆ.ಶಿವಕುಮಾರ್ ಅವರು ತಮ್ಮ ಭಾಗದಲ್ಲಿ ಎಷ್ಟು ಕಾಂಗ್ರೆಸ್ ಶಾಸಕರನ್ನು ಗೆಲ್ಲಿಸಿಕೊಂಡಿದ್ದಾರೆ' ಎಂದು ಎಂ.ಬಿ.ಪಾಟೀಲ್ ಪ್ರಶ್ನೆ ಮಾಡಿದರು.