ಲಿಂಗಾಯತ ವಿವಾದ: ಡಿ. ಕೆ. ಶಿವಕುಮಾರ್ ಹೇಳಿಕೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ. ಎಸ್ ಯಡಿಯೂರಪ್ಪ ಸಮರ್ಥನೆ

ಪ್ರತ್ಯೇಕ ಲಿಂಗಾಯತ ಧರ್ಮವನ್ನು ಬೆಂಬಲಿಸಿದ್ದರಿಂದ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಬೆಲೆ ತೆರಬೇಕಾಯಿತು ಎಂಬ ಜಲಸಂಪನ್ಮೂಲ ಸಚಿವ ಡಿ. ಕೆ. ಶಿವಕುಮಾರ್ ವಿವಾದಾತ್ಮಕ ಹೇಳಿಕೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಸಮರ್ಥಿಸಿಕೊಂಡಿದ್ದಾರೆ.
ಬಿ.ಎಸ್.ಯಡಿಯೂರಪ್ಪ
ಬಿ.ಎಸ್.ಯಡಿಯೂರಪ್ಪ
Updated on: 

ಶಿವಮೊಗ್ಗ: ಪ್ರತ್ಯೇಕ ಲಿಂಗಾಯತ ಧರ್ಮವನ್ನು ಬೆಂಬಲಿಸಿದ್ದರಿಂದ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್  ಬೆಲೆ ತೆರಬೇಕಾಯಿತು ಎಂಬ ಜಲಸಂಪನ್ಮೂಲ ಸಚಿವ ಡಿ. ಕೆ. ಶಿವಕುಮಾರ್ ವಿವಾದಾತ್ಮಕ ಹೇಳಿಕೆಯನ್ನು  ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಸಮರ್ಥಿಸಿಕೊಂಡಿದ್ದಾರೆ.

ಬಿಜೆಪಿ ಸರ್ಕಾರ ರಚಿಸುವ ಯತ್ನದಲ್ಲಿ ಸೋತು ಡಿ. ಕೆ. ಶಿವಕುಮಾರ್ ಅವರನ್ನು ಖಳನಾಯಕ ಎಂದು ಕರೆದಿದ್ದ ಯಡಿಯೂರಪ್ಪ ಈಗ ಲಿಂಗಾಯತ ವಿಚಾರದಲ್ಲಿ ಶಿವಕುಮಾರ್ ಹೇಳಿಕೆಯನ್ನು ಬೆಂಬಲಿಸಿದ್ದಾರೆ.

ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ಶಿವಕುಮಾರ್ ತಮ್ಮ ವೈಯಕ್ತಿಕ ಹೇಳಿಕೆ ನೀಡಿದ್ದಾರೆ. ವಾಸ್ತವ ಸ್ಥಿತಿ ಅರ್ಥವಾದ ನಂತರ ಅವರು ಈ ರೀತಿಯ ಹೇಳಿಕೆ ನೀಡಿದ್ದಾರೆ. ಈ ಹೇಳಿಕೆಯನ್ನು ಎಲ್ಲರೂ ಸ್ವಾಗತಿಸಬೇಕಾಗಿದ್ದು,  ಇದನ್ನು ಯಾವುದೇ ರಾಜಕೀಯಗೊಳಿಸಲು ಇಚ್ಚಿಸುವುದಿಲ್ಲ ಎಂದರು.

 ಲಿಂಗಾಯತ ವಿಚಾರದಲ್ಲಿ ಡಿ. ಕೆ. ಶಿವಕುಮಾರ್ ಕ್ಷಮೆಯಾಚಿಸಿದ್ದರಿಂದ ಕಾಂಗ್ರೆಸ್ ಪಕ್ಷದ ಹಲವು ನಾಯಕರು ವಿಶೇಷವಾಗಿ  ವಿನಯ್ ಕುಲಕರ್ಣೀ, ಎಂ. ಬಿ. ಪಾಟೀಲ್ ಮತ್ತಿತರರು ಆಕ್ರೋಶ ವ್ಯಕ್ತಪಡಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com