ಲಿಂಗಾಯತ ಧರ್ಮದ ಕುರಿತು ಡಿಕೆಶಿ ವ್ಯತಿರಿಕ್ತ ಹೇಳಿಕೆ ಸರಿಯಲ್ಲ: ದೇಶಪಾಂಡೆ

ಲಿಂಗಾಯತ ಧರ್ಮದ ಕುರಿತು ಸಚಿವ ಡಿಕೆ ಶಿವಕುಮಾರ್ ಅವರ ಹೇಳಿಕೆ ಸರಿಯಲ್ಲ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಹಾಗೂ ಸಚಿವ ಆರ್ ವಿ ದೇಶಪಾಂಡೆ ಹೇಳಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಹುಬ್ಬಳ್ಳಿ: ಲಿಂಗಾಯತ ಧರ್ಮದ ಕುರಿತು ಸಚಿವ ಡಿಕೆ ಶಿವಕುಮಾರ್ ಅವರ ಹೇಳಿಕೆ ಸರಿಯಲ್ಲ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಹಾಗೂ ಸಚಿವ ಆರ್ ವಿ ದೇಶಪಾಂಡೆ ಹೇಳಿದ್ದಾರೆ.
ಲಿಂಗಾಯತ ಪ್ರತ್ಯೇಕ ಧರ್ಮದ ಕುರಿತು ಸರ್ಕಾರ ನಡೆಸಿಕೊಂಡ ರೀತಿ ಸರಿಯಲ್ಲ ಎಂದು ಇತ್ತೀಚೆಗಷ್ಟೇ ಸಚಿವ ಡಿಕೆ ಶಿವಕುಮಾರ್ ಬಳ್ಳಾರಿಯಲ್ಲಿ ಹೇಳಿದ್ದರು. ಈ ಹೇಳಿಕೆಗೆ ಕಾಂಗ್ರೆಸ್ ಹಿರಿಯ ಮುಖಂಡ ಎಂಬಿ ಪಾಟೀಲ್ ಕೂಡ ವಿರೋಧ ವ್ಯಕ್ತಪಡಿಸಿದ್ದರು. ಇದೀಗ ಈ ಪಟ್ಟಿಗೆ ಆರ್ ವಿ ದೇಶಪಾಂಡೆ ಸೇರ್ಪಡೆಯಾಗಿದ್ದು, ಬಹಿರಂಗವಾಗಿ ಡಿಕೆ ಶಿವಕುಮಾರ್ ಹೇಳಿಕೆ ನೀಡಿದ್ದು ಸರಿಯಲ್ಲ ಎಂದು ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಸಚಿವ ಸಂಪುಟದಲ್ಲಿ ಕೈಗೊಂಡ ನಿರ್ಣಯ ಎಂದ ಮೇಲೆ ಎಲ್ಲರೂ ಅದಕ್ಕೆ ಬದ್ಧರಾಗಿರಬೇಕು. ಈ ನಿಟ್ಟಿನಲ್ಲಿ ಸಚಿವ ಡಿ.ಕೆ.ಶಿವಕುಮಾರ್ ಲಿಂಗಾಯತ ಸ್ವತಂತ್ರ ಧರ್ಮದ ಕುರಿತು ವ್ಯತಿರಿಕ್ತವಾಗಿ ಹೇಳಿಕೆ ನೀಡಿದ್ದು ಸರಿಯಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.
'ಯಾವ ಕಾರಣಕ್ಕಾಗಿ ಡಿಕೆಶಿಯವರು ಹಾಗೆ ಹೇಳಿದ್ದಾರೋ ಗೊತ್ತಿಲ್ಲ. ಅದು ಅವರ ವೈಯಕ್ತಿಕ ಹೇಳಿಕೆ ಎಂದುಕೊಂಡಿದ್ದೇನೆ. ಹಿಂದಿನ ಸಿಎಂ ಸಿದ್ದರಾಮಯ್ಯರ ನೇತೃತ್ವದ ಸಚಿವ ಸಂಪುಟದಲ್ಲಿ ಲಿಂಗಾಯತಕ್ಕೆ ಸ್ವತಂತ್ರ ಧರ್ಮದ ಮಾನ್ಯತೆ ನೀಡಬೇಕು ನಿರ್ಣಯ ತೆಗೆದುಕೊಳ್ಳಲಾಗಿತ್ತು. ಆ ನಿರ್ಣಯಕ್ಕೆ ಭಿನ್ನಾಭಿಪ್ರಾಯವಿದ್ದರೂ, ಪಕ್ಷದ ನಿರ್ಧಾರವಾಗಿರುವುದರಿಂದ ಅದಕ್ಕೆ ಸಹಮತ ವ್ಯಕ್ತಪಡಿಸಲೇಬೇಕು. ಅಲ್ಲದೆ, ಒಂದು ನಿರ್ಣಯ ತೆಗೆದುಕೊಳ್ಳುವಾಗ ಎಲ್ಲರ ವೈಯಕ್ತಿಕ ಅಭಿಪ್ರಾಯವನ್ನೂ ತೆಗೆದುಕೊಳ್ಳಲಾಗುತ್ತದೆ. ಹಾಗೆಯೇ, ಡಿಕೆಶಿಯವರಿಂದಲೂ ಅಭಿಪ್ರಾಯ ಪಡೆದು ಅಂತಿಮವಾಗಿ ಸ್ವತಂತ್ರ ಧರ್ಮದ ಮಾನ್ಯತೆಗೆ ಶಿಫಾರಸು ಮಾಡಲಾಗಿದೆ. ಈ ವಿಷಯವನ್ನು ಮತ್ತೆ ಚರ್ಚಿಸುವ ಬದಲು, ಇಲ್ಲಿಗೆ ಬಿಡುವುದು ಉತ್ತಮ' ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com