ಮತದಾರರನ್ನು ತಲುಪಲು ಪ್ರತೀ ತಾಲೂಕಿನಲ್ಲಿಯೂ ಒಂದು ರಾಜ್ಯಗಳ ನಾಯಕರು, ಮಾಜಿ ಸಚಿವರು ಹಾಗೂ ಪಕ್ಷದ ಹಿರಿಯ ನಾಯಕರನ್ನು ಬಿಜೆಪಿ ನೇಮಕ ಮಾಡಿದೆ. ಮೋದಿ ಅಲೆಯಲ್ಲಿ ಸಿಲುಕಿರುವ ಕಾಂಗ್ರೆಸ್ ಸೋಲು ಕಾಣಲಿದೆ. ಲೋಕಸಭಾ ಚುನಾವಣೆಯಲ್ಲಿ ರಾಜ್ಯ ಬಿಜೆಪಿ 18 ಕ್ಷೇತ್ರಗಳಲ್ಲಿ ಗೆಲವು ಸಾಧಿಸಲಿದೆ. ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಸರ್ಕಾರದಿಂದ ಜನರು ಬೇಸತ್ತು ಹೋಗಿದ್ದು, ಯಡಿಯೂರಪ್ಪ ಅವರು ಯಾವಾಗ ಮುಖ್ಯಮಂತ್ರಿಯಾಗುತ್ತಾರೋ ಎಂದು ಕಾಯುತ್ತಿದ್ದಾರೆಂದು ಅಶೋಕ್ ಅವರು ತಿಳಿಸಿದ್ದಾರೆ.