ಉಪಚುನಾವಣೆ ಕದನ: ಬಳ್ಳಾರಿಯಲ್ಲಿ ಕಾಂಗ್ರೆಸ್ ಪರ ಸಿಎಂ ಲಿಂಗಪ್ಪ ಪ್ರಚಾರ

ರಾಮನಗರ ಬಿಜೆಪಿ ಅಭ್ಯರ್ಥಿ ಎಲ್.ಚಂದ್ರಶೇಖರ್ ಅವರ ತಂದೆ ಸಿಎಂ. ಲಿಂಗಪ್ಪ ಅವರನ್ನು ಬಳ್ಳಾರಿ ಉಪ ಚುನಾವಣೆಯ ಕಾಂಗ್ರೆಸ್ ಕ್ಯಾಂಪ್ ಕಚೇರಿಯ ಉಸ್ತುವಾರಿಯನ್ನಾಗಿ ನೇಮಕ ಮಾಡಲಾಗಿದೆ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on: 
ಬೆಂಗಳೂರು: ರಾಮನಗರ ಬಿಜೆಪಿ ಅಭ್ಯರ್ಥಿ ಎಲ್.ಚಂದ್ರಶೇಖರ್ ಅವರ ತಂದೆ ಸಿಎಂ. ಲಿಂಗಪ್ಪ ಅವರನ್ನು ಬಳ್ಳಾರಿ ಉಪ ಚುನಾವಣೆಯ ಕಾಂಗ್ರೆಸ್ ಕ್ಯಾಂಪ್ ಕಚೇರಿಯ ಉಸ್ತುವಾರಿಯನ್ನಾಗಿ ನೇಮಕ ಮಾಡಲಾಗಿದೆ. 
ರಾಮನಗರ ಉಪ ಚುನಾವಣೆಯಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರದ ಪಾಲುದಾರ ಪಕ್ಷವಾಗಿ ಜೆಡಿಎಸ್'ಗೆ ಕ್ಷೇತ್ರ ಬಿಟ್ಟುಕೊಡುವುದಕ್ಕೆ ಪ್ರಬಲ ವಿರೋಧ ವ್ಯಕ್ತಪಡಿಸಿದ್ದ ಲಿಂಗಪ್ಪ ಅವರು ಕಾಂಗ್ರೆಸ್ ಅಭ್ಯರ್ಥಿಯನ್ನು ಕಣಕ್ಕಿಳಿಸಬೇಕೆಂದು ಬಲವಾಗಿ ಪ್ರತಿಪಾದಿಸಿದ್ದರು. 
ಆದರೆ, ಈ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಪತ್ನಿ ಅನಿತಾ ಕುಮಾರಸ್ವಾಮಿಯವರು ಸ್ಪರ್ಧಿಸಿರುವುದರಿಂದ ಈ ಕ್ಷೇತ್ರದಲ್ಲಿ ಕಾಂಗ್ರೆಸ್ ತನ್ನ ಬೆಂಬಲವನ್ನು ಜೆಡಿಎಸ್'ಗೆ ನೀಡಿದೆ. 
ಲಿಂಗಪ್ಪ ಅವರ ಪುತ್ರ ಚಂದ್ರಶೇಖರ್ ಅವರನ್ನು ಸೆಳೆದುಕೊಳ್ಳುವಲ್ಲಿ ಬಿಜೆಪಿ ಯಶಸ್ವಿಯಾಗಿದ್ದು, ಇದರಂತೆ ಚಂದ್ರಶೇಖರ್ ಅವನ್ನೇ ಅಭ್ಯರ್ಥಿಯನ್ನಾಗಿ ಕಣಕ್ಕಳಿಸಿಲು ಮುಂದಾಗಿದೆ. ಹೀಗಾಗಿ ಸ್ಥಳೀಯವಾಗಿ ಲಿಂಗಪ್ಪ ಅವರು ಇದ್ದರೆ, ಬಿಜೆಪಿಗೆ ಪರೋಕ್ಷವಾಗಿ ಬೆಂಬಲ ನೀಡುವ ಸಾಧ್ಯತೆಗಳಿರುವ ಶಂಕೆಯಿಂದಾಗಿ ಲಿಂಗಪ್ಪ ಅವರು ಚುನಾವಣೆ ಮುಕ್ತಾಯಗೊಳ್ಳುವವರೆಗೂ ರಾಮನಗರದಲ್ಲಿರಬಾರದೆಂದು ಬಳ್ಳಾರಿ ಕಚೇರಿ ಉಸ್ತುವಾರಿ ನೀಡಲಾಗಿದೆ ಎಂದು ಹೇಳಲಾಗುತ್ತಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com