ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡುರಾವ್
ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡುರಾವ್

ಡಿಕೆಶಿ, ಜಾರಕಿಹೊಳಿ ನಡುವೆ ಭಿನ್ನಾಭಿಪ್ರಾಯ ಇರುವುದು ನಿಜ: ದಿನೇಶ್ ಗುಂಡೂರಾವ್

ಸಚಿವ ಡಿ.ಕೆ.ಶಿವಕುಮಾರ್ ಹಾಗೂ ರಮೇಶ್ ಜಾರಕಿಹೊಳಿ ನಡುವೆ ಭಿನ್ನಾಭಿಪ್ರಾಯಗಳಿರುವುದು ನಿಜ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡುರಾವ್ ಅವರು ಭಾನುವಾರ ಹೇಳಿದ್ದಾರೆ...
ಬಳ್ಳಾರಿ: ಸಚಿವ ಡಿ.ಕೆ.ಶಿವಕುಮಾರ್ ಹಾಗೂ ರಮೇಶ್ ಜಾರಕಿಹೊಳಿ ನಡುವೆ ಭಿನ್ನಾಭಿಪ್ರಾಯಗಳಿರುವುದು ನಿಜ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡುರಾವ್ ಅವರು ಭಾನುವಾರ ಹೇಳಿದ್ದಾರೆ.
ಹೊಸಪೇಟೆಯಲ್ಲಿ ನಿನ್ನೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿವಕುಮಾರ್ ಹಾಗೂ ರಮೇಶ್ ಜಾರಕಿಹೊಳಿ ನಡುವೆ ಭಿನ್ನಾಭಿಪ್ರಾಯಗಳಿರುವುದು ನಿಜ. ಆದರೆ, ಅದು ಪಕ್ಷಕ್ಕೆ ಸಂಬಂಧಿಸಿದ್ದಲ್ಲ. ಅವರವರ ವೈಯಕ್ತಿಕವಾದದ್ದು ಎಂದು ಹೇಳಿದ್ದಾರೆ. 
ಅಭಿಪ್ರಾಯ ಹಾಗೂ ಭಿನ್ನಾಭಿಪ್ರಾಯಗಳು ಸಾಮಾನ್ಯ. ಅದನ್ನು ಪಕ್ಷದ ವೇದಿಕೆಯಲ್ಲಿಯೇ ಚರ್ಚೆ ಮಾಡುತ್ತೇವೆ. ಇಬ್ಬರು ಮುಖಂಡರ ನಡುವೆ ಭಿನ್ನಾಭಿಪ್ರಾಯವಿದೆ. ಇದು ವೈಯಕ್ತಿಕ ಭಿನ್ನಾಭಿಪ್ರಾಯವಾಗಿದ್ದು, ಮಾತುಕತೆ ಮೂಲಕ ಬಗೆಹರಿಸುತ್ತೇವೆ. ಇಬ್ಬರು ಮುಖಂಡರ ನಡುವಿನ ಭಿನ್ನಾಭಿಪ್ರಾಯ ವಿಚಾರದಲ್ಲಿ ಪಕ್ಷದ ನಿಲುವು ಏನೂ ಇಲ್ಲ. ರಮೇಶ್ ಜಾರಕಿಹೊಳಿ ಜೊತೆ ನಾನು ಮಾತನಾಡುತ್ತೇನೆ. ಎಲ್ಲವನ್ನೂ ಸರಿಪಡಿಸುತ್ತೇನೆಂದು ತಿಳಿಸಿದ್ದಾರೆ. 
ಲೋಕಸಭಾ ಉಪ ಚುನಾವಣೆಯಲ್ಲಿ ನಮ್ಮ ಪಕ್ಷದ ಅಭ್ಯರ್ಥಿ ಗೆಲ್ಲಿಸಲು ಪಕ್ಷದ ಎಲ್ಲಾ ನಾಯಕರು ಜೊತೆಗೂಡಿ ಒಗ್ಗಟ್ಟಾಗಿ ಹೋರಾಟ ಮಾಡುತ್ತೇವೆ. ಎಡಪಕ್ಷಗಳು ಸಹ ನಮಂಗೆ ಬೆಂಬಲ ನೀಡಿವೆ. ಉಗ್ರಪ್ಪ ಹೊರಗಿನವರು ಎಂಬ ಹೇಳಿಕೆ ಅರ್ಥವಿಲ್ಲದ್ದು. ಹೋರಾಟದಿಂದ ಬಂದಿರುವ ಉಗ್ರಪ್ಪ ಅವರು ಜನಪರ ನಿಲುವಿನ ವ್ಯಕ್ತಿಯಾಗಿದ್ದಾರೆ. ಶಿವಮೊಗ್ಗದಲ್ಲಿ ತಾವೇ ಗೆದ್ದೇ ಗೆಲ್ಲುತ್ತೇವೆಂದು ಬೀಗುತ್ತಿದ್ದ ಬಿಜೆಪಿಯವರಿಗೆ ಇದೀಗ ನಡುಕ ಶುರುವಾಗಿದೆ ಎಂದಿದ್ದಾರೆ. 

Related Stories

No stories found.

Advertisement

X
Kannada Prabha
www.kannadaprabha.com