ಬಳಿಕ ದೇವೇಗೌಡ ಅವರು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ, ಶಿವಮೊಗ್ಗ ನಗರ, ಸಾಗರ ಸೇರಿದಂತೆ ಮತ್ತಿತರ ಕಡೆ ಜೆಡಿಎಸ್ ಅಭ್ಯರ್ಥಿಯನ್ನು ಹೆಚ್ಚಿನ ಮತಗಳ ಅಂತರದಿಂದ ಗೆಲ್ಲಿಸಿ ಲೋಕಸಭೆಗೆ ಆಯ್ಕೆ ಮಾಡಬೇಕೆಂದು ಮತಬಾಂಧವರಿಗೆ ಮನವಿ ಮಾಡಿದರು. ಈ ವೇಳೆ ಜಿಲ್ಲಾ ಜೆಡಿಎಸ್ ಮುಖಂಡರಾದ ಮಂಜುನಾಥ್‍ಗೌಡ, ಅಪ್ಪಾಜಿಗೌಡ, ಶ್ರೀಕಾಂತ್, ಮಧುಬಂಗಾರಪ್ಪ, ಮಾಜಿ ಸಚಿವರಾದ ಕಾಗೋಡು ತಿಮ್ಮಪ್ಪ, ಕಿಮ್ಮನೆ ರತ್ನಾಕರ ಸೇರಿದಂತೆ ಮತ್ತಿತರರು ಸಾಥ್ ನೀಡಿದರು.