ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಅಪ್ರಚಾರದಿಂದ ಕಾಂಗ್ರೆಸ್ ಸೋಲಬೇಕಾಯಿತು. ಕಾಂಗ್ರೆಸ್ ಪಕ್ಷಕ್ಕೆ ಸಾಪ್ಟ್, ಹಾರ್ಡ್ ಹಿಂದೂತ್ವ ಎಂಬುದು ಇಲ್ಲ, ಕರಾವಳಿ ಹಿಂದುತ್ವದ ಲ್ಯಾಬೋರೇಟರಿ ಇದ್ದ ಹಾಗೆ. ಹೀಗಿದ್ದರೂ 2013ರಲ್ಲಿ ಹೆಚ್ಚಿನ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದೇವು. ಉಪಚುನಾವಣೆಯಲ್ಲಿ ಬಿಜೆಪಿಯವರ ಅಪಪ್ರಚಾರ ತಡೆಯಲು ಸೂಕ್ತ ಬಂದೋಬಸ್ತ್ ಮಾಡಲಾಗಿದೆ ಎಂದು ಸಿದ್ದರಾಮಯ್ಯ ತಿಳಿಸಿದರು.