ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ: ಉಪ ಮುಖ್ಯಮಂತ್ರಿ ಪರಮೇಶ್ವರ್ ವಿರುದ್ದ ದೂರು ದಾಖಲು

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಆರೋಪ ಮೇಲೆ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಹಾಗೂ ಬಿಜೆಪಿ ಶಾಸಕ ಎಸ್.ಎ.ರಾಮದಾಸ್ ವಿರುದ್ಧ ಗುರುವಾರ ದೂರು ದಾಖಲಾಗಿದೆ...
ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್
ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್
ಬೆಂಗಳೂರು: ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಆರೋಪ ಮೇಲೆ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಹಾಗೂ ಬಿಜೆಪಿ ಶಾಸಕ ಎಸ್.ಎ.ರಾಮದಾಸ್ ವಿರುದ್ಧ ಗುರುವಾರ ದೂರು ದಾಖಲಾಗಿದೆ. 
ಈ ಕುರಿತಂತೆ ಬಾಗಲಕೋಟೆ ಉಪ ಆಯುಕ್ತ ಕೆ.ಜಿ.ಶಾಂತರಾಮ್ ಅವರು ಮಾತನಾಡಿ, ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಿದರೆ, ರಸ್ತೆ ಅಭಿವೃದ್ಧಿಪಡಿಸಲಾಗುವುದು ಎಂದು ಪರಮೇಶ್ವರ್ ಅವರು ಭರವಸೆ ನೀಡಿದ್ದರು. ರಾಮ್ ದಾಸ್ ಅವರು ಪ್ರಚಾರ ಸಂದರ್ಭದಲ್ಲಿ ರೂ.2000ಯನ್ನು ಆರತಿ ತಟ್ಟೆಗೆ ಹಾಕಿದ್ದರು ಎಂದು ಹೇಳಿದ್ದಾರೆ. 
ಈ ನಡುವೆ ಮಂಡ್ಯ ಬಿಜೆಪಿ ನಾಯಕರು ಕಾಂಗ್ರೆಸ್ ನಾಯಕ ಹಾಗೂ ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ದ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದು, ಮಂಡ್ಯ ಜಿಲ್ಲೆಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಮತದಾರರಿಗೆ ಹಣವನ್ನು ಹಂಚಿಕೆ ಮಾಡಿದ್ದಾರೆಂದು ಆರೋಪಿಸಿದ್ದಾರೆ. 
ಜಮೀರ್ ಮಂಡ್ಯ ಜಿಲ್ಲೆಗೆ ಭೇಟಿ ನೀಡಿದ ಸಂದರ್ಭದಲ್ಲಿ ರೂ.2,000 ನೋಟುಗಳನ್ನು ಹಂಚಿಕೆ ಮಾಡಲಾಗಿತ್ತು. ಸ್ಥಳದಲ್ಲಿದ್ದ ಪೊಲೀಸರು ಮೂಕ ಪ್ರೇಕ್ಷಕರಾಗಿದ್ದರು ಎಂದು ಹೇಳಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com